Sunday February 11 2018

Follow on us:

Contact Us

ಬಾಬರಿ ಮಸ್ಜಿದ್ ಮತ್ತು ತಲಾಖ್ ಪ್ರಕರಣಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಒವೈಸಿ

ನ್ಯೂಸ್ ಕನ್ನಡ ವರದಿ-(11.2.18): ಹೈದರಾಬಾದ್: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಮುಸ್ಲಿಂ ವಿರೋಧಿ ನಿರ್ಧಾರಗಳನ್ನು ಪ್ರಶ್ನಿಸಿರುವ ಸಂಸದ ಹಾಗೂ ಆಲ್ ಇಂಡಿಯಾ ಮುಸ್ಲಿಂ ಇತ್ತೇಹಾದ್ ಮಜ್ಲಿಸ್ ನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ‘ಬಾಬರಿ ಮಸೀದಿ ವಿವಾದ ಹಾಗೂ ತ್ರಿವಳಿ ತಲಾಖ್ ಕುರಿತಾದ ವಿಚಾರಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿಗೆ ಆರ್ಟ್ ಆಫ್ ಲಿವಿಂಗ್ ನ ಮುಖ್ಯಸ್ಥರಾಗಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ‘ರಾಮ ಜನ್ಮ ಭೂಮಿ ವಿವಾದದ ಕುರಿತು ಸೌಹಾರ್ದಯುತ ಪರಿಹಾರ ಕಲ್ಪಿಸುವ’ ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಸದಸ್ಯ ಸೈಯದ್ ಸಲ್ಮಾನ್ ಅಲ್ ಹುಸೇನಿ ‘ಮಸೀದಿಯನ್ನು ಸ್ಥಳಾಂತರಿಸಲು ಇಸ್ಲಾಂ ನಲ್ಲಿ ಅವಕಾಶವಿದೆ’ ಎಂದು ಹೇಳಿದ್ದರು. ಇದೀಗ ಈ ಕುರಿತು ಪ್ರತಿಕ್ರಿಯಿಸಿರುವ ಒವೈಸಿ, ” ಒಂದು ಬಾರಿ ಒಂದು ಸ್ಥಳದಲ್ಲಿ ನಿರ್ಮಾಣವಾದ ಮಸೀದಿ ಅದು ಕೊನೆಯವರೆಗೂ ಶಾಶ್ವತವಾಗಿ ಉಳಿಯುತ್ತದೆ, ಯಾರು ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುತ್ತಾರೋ ಅವ ಸರ್ವ ಶಕ್ತನಾದ ಸೃಷ್ಟಿಕರ್ತ ಅಲ್ಲಾಹನ ಬಳಿ ಉತ್ತರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನು ತ್ರಿವಳಿ ತಲಾಖ್ ಬಗ್ಗೆ ಮಾತನಾಡಿದ ಅವರು, ‘ಕೆಂದ್ರ ಸರಕಾರ ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿದ್ದು, ಅದು ತ್ರಿವಳಿ ತಲಾಖ್ ಕುರಿತಾಗಿ ಕೈಗೊಂಡ ನಿರ್ಧಾರವು ಅಸಂಬದ್ದವಾಗಿದೆ. ಏಕೆಂದರೆ ಅದು ಅಲ್ಪಸಂಖ್ಯಾತರಿಗೆ ನೀಡಲಾಗುವ ಸಂವಿಧಾನ ನಿಬಂಧನೆಗಳಿಗೆ ವಿರುದ್ಧವಾಗಿದ್ದು, ಇದನ್ನು ಮುಸ್ಲಿಮರು ಒಪ್ಪುವುದಿಲ್ಲ ಎಂದು’ ಕೇಂದ್ರ ಸರಕಾರ ವಿರುದ್ಧ ಕಿಡಿಕಾರಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸ್ವತಹ ಬೆಂಕಿ ಹಚ್ಚಿ ಹುಡುಗಿಯನ್ನು ತಬ್ಬಿಕೊಂಡು ಕೊಲೆಗೆ ಯತ್ನ! ಸಿಸಿಟಿವಿ ವೀಡಿಯೋ ವೀಕ್ಷಿಸಿ

ಮುಂದಿನ ಸುದ್ದಿ »

ಪತನಗೊಂಡ ಸರಾಟೋವಾ ವಿಮಾನ: 71 ಮಂದಿ ಪ್ರಯಾಣಿಕರು ಮೃತ್ಯು!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×