Saturday October 21 2017

Follow on us:

Contact Us

ಹಿಂದೂ ಧರ್ಮೀಯರಿಗೆ ದೀಪಾವಳಿ ಶುಭಾಷಯ ಕೋರಿದ ಪಾಕ್ ಪ್ರಧಾನಿ

ನ್ಯೂಸ್ ಕನ್ನಡ ವರದಿ-(21.10.17): ನೆರೆಯ ದೇಶವಾದ ಪಾಕಿಸ್ತಾನದಲ್ಲಿ ಹಿಂದೂ ಧರ್ಮೀಯರು ಅಲ್ಪಸಂಖ್ಯಾತರಾಗಿದ್ದು, ಇದೀಗ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂಗಳಿಗೆ ಪಾಕಿಸ್ತಾನದ ಪ್ರಧಾನಿ ಶಾಹಿದ್ ಖಕಾನ್ ಅಬ್ಬಾಸಿರವರು ಶುಭಕೋರಿದ್ದಾರೆ. ದೇಶದಲ್ಲಿರುವ ಅಲ್ಪಸಂಖ್ಯಾತ ವರ್ಗದವರ ರಕ್ಷಣೆಗೆ ಹಾಗೂ ತಾರತಮ್ಯ ಮುಕ್ತವಾದ ಸಮಾಜವನ್ನು ನಿರ್ಮಿಸಲು ಪಾಕಿಸ್ತಾನದ ಸರಕಾರವು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ಮತ್ತು ಅವರ ಮೂಲಭೂತ ಹಕ್ಕುಗಳ ರಕ್ಷಣೆಗೆ ಪಾಕ್ ಸರ್ಕಾರ ಬದ್ಧವಾಗಿದೆ ಎಂದು ಅಬ್ಬಾಸಿ ಅವರು ತಮ್ಮ ದೀಪಾವಳಿ ಸಂದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ ಪವಿತ್ರ ಪ್ರವಾದಿಗಳ ಸುವರ್ಣ ತತ್ವಗಳು ನಮಗೆ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದ್ದಾರೆ. ಬೆಳಕಿನ ಹಬ್ಬ ದೀಪಾವಳಿ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಶಾಂತಿ ನೀಡಲು ಎಂದು ಪಾಕಿಸ್ತಾನಾದ್ಯಂತ ಇರುವ ಹಿಂದೂಗಳಿಗೆ ಅಬ್ಬಾಸಿ ಶುಭಾಶಯ ಕೋರಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬ್ಯಾಡ್ಮಿಂಟನ್: ಅಗ್ರಸ್ಥಾನದ ಲೀ ಚೋಂಗ್ ವಿ ವಿರುದ್ಧ ಜಯ ಸಾಧಿಸಿದ ಭಾರತದ ಎಚ್.ಎಸ್.ಪ್ರಣಯ್

ಮುಂದಿನ ಸುದ್ದಿ »

ಇನ್ನುಮುಂದೆ ಸರಕಾರವನ್ನು ಹೊಗಳುವ ಸಿನಿಮಾ ಮಾತ್ರ ಮಾಡಬೇಕಾದೀತು: ಪಿ. ಚಿದಂಬರಂ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×