Tuesday December 5 2017

Follow on us:

Contact Us

ನನ್ನ ಅಮಿತ್ ಶಾ ಹೇಳಿಕೆ ವೀಡಿಯೋವನ್ನು ವೈರಲ್ ಮಾಡಿದ್ದು ರವಿ ಡಿ ಚೆನ್ನಣ್ಣನವರ್!

ನ್ಯೂಸ್ ಕನ್ನಡ ವರದಿ-(05.12.17): ಬಿಜೆಪಿಯು ತನ್ನ ಯುವಮೋರ್ಚಾ ಘಟಕವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಯುವಮೋರ್ಚಾದಿಂದ ಸಾಧ್ಯವಾದಷ್ಟು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಬೇಕು. ಕೊನೆಪಕ್ಷ ಲಾಠಿಚಾರ್ಜ್ ಹಂತಕ್ಕಾದರೂ ತಲುಪಬೇಕು ಎಂದು ಅಮಿತ್ ಶಾ ಹೇಳಿದ್ದಾರೆ. ನಾನು ಭವಿಷ್ಯದಲ್ಲಿ ಈ ಕುರಿತು ಕ್ರಮ ಕೈಗೊಳ್ಳುತ್ತೇನೆ ಎಂದು ಸಂಸದ ಪ್ರತಾಪಸಿಂಹ ಹೇಳಿದ ವೀಡಿಯೋವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಪ್ರತಾಪಸಿಂಹ ನೇತೃತ್ವದಲ್ಲಿ ಹುಣಸೂರಿನಲ್ಲಿ ಗಲಭೆ ನಡೆದಿತ್ತು. ಪ್ರತಾಪಸಿಂಹರನ್ನು ಬಂದಿಸಲಾಗಿತ್ತು. ಇದೀಗ ಈ ಕುರಿತು ಖಾಸಗಿ ಚಾನೆಲ್ ಒಂದಕ್ಕೆ ಪ್ರತಾಪಸಿಂಹ ಸಂದರ್ಶನ ನೀಡಿದ್ದಾರೆ.

ವೀಡಿಯೊ ಕುರಿತು ಮಾತನಾಡಿದ ಅವರು, ಈ ವೀಡಿಯೋವನ್ನು ಸಾಮಾಜಿಕ ತಾಣಗಳಲ್ಲಿ ಲೀಕ್ ಮಾಡಿದ್ದು ಬೇರಾರು ಅಲ್ಲ, ಎಸ್ಪಿ ರವಿ ಡಿ ಚೆನ್ನಣ್ಣನವರ್. ಅವರು ಸರಕಾರದ ಗುಲಾಮರಂತೆ ಕೆಲಸ ಮಾಡುತ್ತಿದ್ದಾರೆ. ಅವರು ನನ್ನ ಮೇಲೆ ಜನರಿಗೆ ತಪ್ಪು ಭಾವನೆ ಮೂಡಲಿ ಎಂದು ಈ ವೀಡಿಯೋವನ್ನು ಲೀಕ್ ಮಾಡಿದ್ದಾರೆ. ನಾನು ಮಾತನಾಡಿದ್ದು ನಿಜ. ಅದಕ್ಕೂ ಹುಣಸೂರಿನಲ್ಲಿ ನಡೆದ ಗಲಭೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಪ್ರತಾಪಸಿಂಹ ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸಂಸದ ಪ್ರತಾಪಸಿಂಹರನ್ನು ಜಾಮೀನು ರಹಿತವಾಗಿ ಬಂಧಿಸಿ ಕ್ರಮ ಕೈಗೊಳ್ಳುವ ಧೈರ್ಯವಿಲ್ಲವೇ?

ಮುಂದಿನ ಸುದ್ದಿ »

ಪ್ರತಾಪಸಿಂಹ ಹಾಗೂ ನನ್ನ ನಡುವೆ ಫೇಸ್ ಬುಕ್ ಕ್ಯಾಂಪೇನ್ ಬೇಡ: ಎಸ್ಪಿ ರವಿ ಚೆನ್ನಣ್ಣನವರ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×