Monday November 13 2017

Follow on us:

Contact Us

ಬಿಜೆಪಿಗರು ಏನೇ ಹೇಳಲಿ, ನಾನೊಬ್ಬ ಅಪ್ಪಟ ಶಿವಭಕ್ತ: ರಾಹುಲ್ ಗಾಂಧಿ

ನ್ಯೂಸ್ ಕನ್ನಡ ವರದಿ(13.11.2017): ಚುನಾವಣೆಯು ಹತ್ತಿರ ಬರುತ್ತಿದ್ದಂತೆಯೇ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಕ್ರಮವನ್ನು ಹಲವು ಬಿಜೆಪಿಗರು ಟೀಕಿಸಿದ್ದರು. ಇದೀಗ ಶಿವ ದೇವಾಲಯಕ್ಕೆ ಪೂಜೆಗಾಗಿ ಆಗಮಿಸಿ ಕರ್ಮಗಳನ್ನು ನಿರ್ವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಗರು ನಾನು ದಏವಾಲಯಗಳಿಗೆ ಭೇಟಿ ನೀಡುವುದರ ಕುರಿತಾದಂತೆ ಏನೇ ಹೇಳಲಿ, ಆದರೆ ನಾನೊಬ್ಬ ಅಪ್ಪಟ ಶಿವಭಕ್ತ. ಆದ್ದರಿಂದ ನಾನು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿಯ ರಾಜ್ಯ ಕಾರ್ಯದರ್ಶಿ ಭೂಪೇಂದ್ರ ಯಾದವ್, ರಾಹುಲ್ ಗಾಂಧಿಯು ಇತ್ತೀಚೆಗೆ ದೇವಾಲಯಗಳಿಗೆ ಭೇಟಿ ನೀಡುವುದು ಮತ್ತು ದೇವಾಲಯಗಳಲ್ಲಿ ಪೂಜೆ ಸಲ್ಲಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಭಾರತೀಯ ಸಂಸ್ಕøತಿಯ ಪ್ರಕಾರ ಇದೊಂದು ಉತ್ತಮ ವಿಚಾರ ಆದರೆ, ಈ ಭಕ್ತಿಯು ನೈಸರ್ಗಿಕವಾಗಿ ಬರಬೇಕೆ ಹೊರತು ಚುನಾವಣೆ ಸಮೀಪಿಸುತ್ತಿರುವಾಗ ಮಾತ್ರವಲ್ಲ ಎಂದು ವ್ಯಂಗ್ಯವಾಡಿದ್ದರು. ಚುನಾವಣಾ ಪ್ರಚಾರ ನಿಮಿತ್ತ ಗುಜರಾತ್ ನಲ್ಲಿರುವ ರಾಃಉಲ್ ಗಾಂಧಿ, ಪ್ರಸಿದ್ಧ ಅಂಬಾಜಿ ಮತ್ತು ಅಕ್ಷರಧಾಮ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕುಂದಾಪುರ: ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಹಾಲಾಡಿ ವಿರುದ್ಧ ಬಹಿರಂಗ ಅಸಮಾಧಾನ, ಲಾಠಿಚಾರ್ಜ್

ಮುಂದಿನ ಸುದ್ದಿ »

ದುಬೈಯಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಗಮ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×