Sunday November 12 2017

Follow on us:

Contact Us

ಕಣ್ಣೂರು: ಕೊಲೆ ಪ್ರಕರಣದ ಆರೋಪಿಯಾಗಿದ್ದ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ!

ನ್ಯೂಸ್ ಕನ್ನಡ ವರದಿ(12.11.2017): ಕೇರಳದಲ್ಲಿ ಆಡಳಿತಾರೂಢ ಸಿಪಿಎಂ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ನಡುವಿನ ಭಿನ್ನಾಭಿಪ್ರಾಯದಿದಾಗಿ ಹಲವು ಹತ್ಯೆ ಮತ್ತು ಹಲ್ಲೆಗಳು, ಬಾಂಬ್ ದಾಳಿಗಳು ನಡೆಯುತ್ತಲೇ ಇವೆ. ಇದೀಗ ಸಿಪಿಎಂ ಪಕ್ಷದ ಸಕ್ರಿಯ ಕಾರ್ಯಕರ್ತನೋರ್ವನ ಕೊಲೆ ಪ್ರಕರಣದ ಆರೋಪಿಯಾಗಿದ್ದ ರಾಷ್ಟ್ರೀಯ ಸವಯಂ ಸೇವಕ ಸಂಘದ ಕಾರ್ಯಕರ್ತನೋರ್ವನನ್ನು ಹಾಡಹಗಲೇ ಕೊಚ್ಚಿ ಕೊಲೆಗೈಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯು ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದೆ.

ಪೊಲೀಸರ ಹೇಳಿಕೆ ಪ್ರಕಾರ, ಕೊಲೆಗೈಯಲ್ಪಟ್ಟ ಆನಂದನ್ ಎಂಬ ವ್ಯಕ್ತಿಯು ಮೂರು ವರ್ಷಗಳ ಹಿಂದೆ ಸಿಪಿಎಂ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದ ಖಾಸಿಮ್ ಎಂಬಾತನನ್ನು ಕೊಂದ ಪ್ರಕರಣದ ಆರೋಪಿಯಾಗಿದ್ದ. ಜೈಲಿನಲ್ಲಿದ್ದ ಈತ ಜಾಮೀನು ಪಡೆದು ಹೊರಬಂದಿದ್ದೇ ತಡ ಕಾರಿನಲ್ಲಿ ಬಂದ ಅಪರಿಚಿತರು ಬರ್ಬರ ಹತ್ಯೆಗೈದಿದ್ದಾರೆ. ಗಂಭೀರ ಗಾಯಗೊಂಡಿದ್ದ ಆನಂದನ್ ನನ್ನು ಆಸ್ಪತ್ರೆಗೆ ಸಆಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದ. ಇದೊಂದು ಪ್ರತೀಕಾರದ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಚಿತ್ರಕೂಟ ಉಪಚುನಾವಣೆ: ಬಿಜೆಪಿಯನ್ನು ಮಣಿಸಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್!

ಮುಂದಿನ ಸುದ್ದಿ »

ಇರಾಕ್ ಇರಾನ್ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಭಾರೀ ಭೂಕಂಪ: ಕನಿಷ್ಟ 150 ಮೃತ್ಯು

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×