Tuesday February 13 2018

Follow on us:

Contact Us

ಸಿದ್ದರಾಮಯ್ಯ ಅಪರಾಧ ರಹಿತ, ಕಳಂಕ ರಹಿತ ಮುಖ್ಯಮಂತ್ರಿ!: ಎಡಿಆರ್‌ ವರದಿ

ನ್ಯೂಸ್ ಕನ್ನಡ ವರದಿ: ಭಾರತದ ಎಲ್ಲಾ 31 ರಾಜ್ಯಗಳ ಮುಖ್ಯಮಂತ್ರಿಗಳು ಹೊಂದಿರುವ ಆಸ್ತಿ, ವಿದ್ಯಾರ್ಹತೆ ಮತ್ತವರ ವಿರುದ್ಧವಿರುವ ಪ್ರಕರಣಗಳ ಬಗ್ಗೆ ಖಾಸಗಿ ಸಂಸ್ಥೆ ಅಸೋಸಿಯೇಷನ್‌‌ ಫಾರ್‌‌ ಡೆಮಾಕ್ರಟಿಕ್‌‌ ರೈಟ್ಸ್‌‌ (ಎಡಿಆರ್‌) ಅಂಕಿ-ಅಂಶಗಳನ್ನು ಸಂಗ್ರಹಿಸಿದೆ. ಈ ಸಂಸ್ಥೆಯ ವರದಿ ಪ್ರಕಾರ ಯಾವುದೇ ಪ್ರಕರಣ ದಾಖಲಾಗದೇ ಯಾವುದೇ ಅಪರಾಧದ ಹಣೆಪಟ್ಟಿ ಇಲ್ಲದ ಕಳಂಕ ರಹಿತ ಮುಖ್ಯಮಂತ್ರಿಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದಾರೆ.

22 ಪ್ರಕರಣಗಳ ಆರೋಪ ಹೊಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅತೀ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ವಿರುದ್ಧ 11 ಪ್ರಕರಣಗಳು ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ 10 ಪ್ರಕರಣಗಳು ದಾಖಲಾಗಿ ನಂತರದ ಸ್ಥಾನಗಳಲ್ಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀನ್‌ ಕುಮಾರ್ ವಿರುದ್ಧ‌ ಕೊಲೆಯಂತಹ ಗಂಭೀರ ಆರೋಪ ಪ್ರಕರಣ ದಾಖಲಾಗಿದೆ.

ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ₹177 ಕೋಟಿ ಆಸ್ತಿಯೊಂದಿಗೆ ಅಗ್ರಸ್ಥಾನ, ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ₹129 ಕೋಟಿಯೊಂದಿಗೆ ದ್ವಿತೀಯ ಹಾಗೂ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ₹48 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರನೇ ಸ್ಥಾನದಲ್ಲಿದ್ದಾರೆ.

ತ್ರಿಪುರ ಮುಖ್ಯಮಂತ್ರಿ ಮಾಣಿಕ್‌ ಸರ್ಕಾರ್‌ ₹26 ಲಕ್ಷ ಆಸ್ತಿ ಹೊಂದಿ ದೇಶದ ಅತ್ಯಂತ ಬಡ ಮುಖ್ಯಮಂತ್ರಿಯಾದರೆ, ನಂತರದ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ₹30 ಲಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ₹55 ಲಕ್ಷ ಇದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಚುನಾವಣೆ ಬಂದಾಗ ಬಿಜೆಪಿಗೆ ಮೀನುಗಾರರ ಹಾಗೂ ಹಿಂದೂಗಳ ನೆನಪಾಗುತ್ತದೆ: ಪ್ರಮೋದ್ ಮಧ್ವರಾಜ್

ಮುಂದಿನ ಸುದ್ದಿ »

ವೇಗಿ ಜಸ್ಪ್ರೀತ್ ಬುಮ್ರಾ ಯಾರ್ಕರ್ ಗೆ ಕ್ಲೀನ್ ಬೌಲ್ಡ್ ಆದ ನಟಿ ಯಾರು ಗೊತ್ತೇ?

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×