Friday January 12 2018

Follow on us:

Contact Us

ಬಿಜೆಪಿಯವರನ್ನು ಉಗ್ರಗಾಮಿಗಳೆಂದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಿರುದ್ಧ ದೂರು!

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರ ಬಂದಾಗ ರಾಜಕೀಯ ನಾಯಕರು ಪರಸ್ಪರ ವಾಗ್ದಾಳಿ, ಆರೋಪ, ಪ್ರತ್ಯಾರೋಪ, ಆಕ್ರೋಶ ವ್ಯಕ್ತ ಪಡಿಸುವುದು ಸಾಮಾನ್ಯ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಸುರೇಶ್ ಕುಮಾರ್, ‘ತಮ್ಮ ಪಕ್ಷದ ಪ್ರಚಾರದ ವೇಳೆ ನಮ್ಮ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಧರ್ಭದಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ಉಗ್ರಗಾಮಿ ಸಂಘಟನೆ ಎಂದು ಕರೆದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇವೆ ಎಂದರು.

ಒಮ್ಮೆ ವಿಧಾನಸಭೆಯಲ್ಲಿ ನಮಗೆಲ್ಲಾ ವ್ಯಾಕರಣ ಪಾಠ ಹೇಳಿಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏಕವಚನ, ಬಹುವಚನದ ವ್ಯಾತ್ಯಾಸವೇ ಗೊತ್ತಿಲ್ಲ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ಉಗ್ರಗಾಮಿ ಸಂಘಟನೆ ಎಂದು ಕರೆದದ್ದು ಗಂಭೀರ ಆರೋಪವಾಗಿದೆ. ಇದರ ವಿರುದ್ಧ ನಾವು ಕಾನೂನು ಹೋರಾಟ ನಡೆಸಿಯೇ ಸಿದ್ಧ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ವಾಟ್ಸ್ಯಾಪ್‍ ನಲ್ಲಿ ಮಹಿಳೆಗೆ,ಧರ್ಮಕ್ಕೆ ನಿಂದನೆ:ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮುಂದಿನ ಸುದ್ದಿ »

ಕನ್ನಡ ನಟಿ ರಾಗಿಣಿಯನ್ನು ಬೆಡ್ ರೂಮ್ ಗೆ ಕರೆದ ರಾಜಕಾರಣಿ ನಾಗರಾಜ್!!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×