Tuesday December 5 2017

Follow on us:

Contact Us

ಸಿದ್ದರಾಮಯ್ಯ ಸರ್ಕಾರ ಭೃಷ್ಟಾಚಾರ ರಹಿತ ಸರ್ಕಾರ: ದೇವೇಗೌಡರಿಂದ ಪ್ರಶಂಸೆ

ನ್ಯೂಸ್ ಕನ್ನಡ ವರದಿ: ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಕಸರತ್ತು ನಡೆಸುತ್ತಿರುವ ಎಲ್ಲಾ ಪಕ್ಷಗಳು ತಮ್ಮ ಪಕ್ಷದಿಂದ ಕಣಕ್ಕಿಳಿಸುವ ಸೂಕ್ತ ಅಭ್ಯರ್ಥಿಗಳ ಆಯ್ಕೆಗಾಗಿ ರಾಜ್ಯ ಪರ್ಯಟನೆ ಆರಂಭಿಸಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತನ್ನದೇ ಆದ ಯಾತ್ರೆ ಆರಂಭಿಸಿದ್ದರೆ ಇತ್ತ ಜೆಡಿಎಸ್ ವರಿಷ್ಠ ದೇವೇಗೌಡರು ಕಾಲಿಗೆ ಟೊಂಕ ಕಟ್ಟಿ ಕಾರ್ಯಕರ್ತರೊಂದಿಗೆ ಬಿರುಸಿನ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಇಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು ಪ್ರಸಕ್ತ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಭೃಷ್ಟಾಚಾರ ರಹಿತ ಆಡಳಿತ ನೀಡಿದೆ, ರಾಜ್ಯ ಸರ್ಕಾರದ ಮಂತ್ರಿಗಳು ಭೃಷ್ಟಾಚಾರ ರಹಿತ ಮಂತ್ರಿಗಳು ಎಂದು ಪ್ರಶಂಸಿಸಿದ್ದಾರೆ. ಮೊದಲ ಬಾರಿಗೆ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದು ನಾನು. ಆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ನನ್ನ ಮಗ ಕುಮಾರಸ್ವಾಮಿ ಸರ್ಕಾರವು ಭೃಷ್ಟಾಚಾರ ರಹಿತ ಆಡಳಿತ ನೀಡಿದೆ ಆದರೆ ಅವರ ಮೇಲೆ ಪ್ರಕರಣವೊಂದರ ವಿಚಾರಣೆ ಬಾಕಿ ಇರುವುದರಿಂದ ಹಾಗೆ ಹೇಳಲು ಬರುವುದಿಲ್ಲವೆಂದು ಎಂದು ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡದೇ ಅಚ್ಚರಿ ಉಂಟುಮಾಡಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

246 ರನ್ ಗಳಿಗೆ ಭಾರತ ಡಿಕ್ಲೇರ್: ಶ್ರೀಲಂಕಾಗೆ ಭರ್ಜರಿ 410 ರನ್ ಟಾರ್ಗೆಟ್!

ಮುಂದಿನ ಸುದ್ದಿ »

ಬಾಬರಿ ಮಸ್ಜಿದ್ ವಿವಾದ: ಫೆಬ್ರವರಿ 8ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×