Tuesday March 13 2018

Follow on us:

Contact Us

“ಅಲ್ಲಾಡ್ಸು” ಡ್ಯಾನ್ಸ್ ವೀಡಿಯೋ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತೇ?

ನ್ಯೂಸ್ ಕನ್ನಡ ವರದಿ-(13.3.18): ಈಗ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹವಾ ತುಂಬಾನೇ ಜೋರಾಗಿದೆ. ಈ ಸಂದರ್ಭದಲ್ಲಿ ಹಲವು ಫೇಕ್ ಗಳು ರಾರಾಜಿಸುವುದಂತೂ ಇದ್ದದ್ದೇ. ಹೀಗಾಗಿ ಹಲವು ದಿನಗಳಿಂದ ಚೌಕ ಚಿತ್ರದ ಅಲ್ಲಾಡ್ಸು ಅಲ್ಲಾಡ್ಸು ಹಾಡಿಗೆ ಮುಖ್ಯಮಂತ್ರಿ ಸಿದ್ದರಾಂಯ ನೃತ್ಯ ಮಾಡುತ್ತಿರುವಂತೆ ವೀಡಿಯೋವೊಂದು ಸಾಮಾಜಿಕ ತಾಣದಾದ್ಯಂತ ವೈರಲ್ ಆಗಿತ್ತು. ಈ ಕುರಿತು ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಾಟ್ಸಾಪ್ ಮತ್ತು ಸಆಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಡ್ಯಾನ್ಸ್ ವೀಡಿಯೋ ನನ್ನದಲ್ಲ. ಅದರಲ್ಲಿರುವ ವ್ಯಕ್ತಿ ನಾನಲ್ಲ. ನನ್ನ ವಿರುದ್ಧ ಸಉಮ್ಮನೇ ಅಪಪ್ರಚಾರ ಮಾಡಲಾಗುತ್ತಿದೆ. ನಾನು ಡ್ಯಾನ್ಸ್ ಮಾಡಿಲ್ಲ. ಇಂತಹಾ ವ್ಯಕ್ತಿಗಳಿಗೆ ಬೇರೆ ಕೆಲಸವಿಲ್ಲವೇ? ಆದರೂ ಜಾನಪದ ನೃತ್ಯಗಳನ್ನು ಮಾಡುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು. ಈ ವೀಡಿಯೋದಲ್ಲಿರುವುದು ನಾನಲ್ಲ ಎಂದ ಸಿಎಂ, ಅಮಿತ್ ಶಾ, ಮೋದಿ ಒಂದಲ್ಲ ಹತ್ತು ಬಾರಿ ರಾಜ್ಯಕ್ಕೆ ಬಂದರೂ ಯಾವುದೆ ಪ್ರಯೋಜನವಿಲ್ಲ ಎಂದು ಹೇಳಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆಧಾರ್ ಲಿಂಕಿಂಗ್: ಅನಿರ್ಧಿಷ್ಟಾವಧಿಗೆ ಗಡುವು ವಿಸ್ತರಿಸಿದ ಸುಪ್ರೀಮ್ ಕೋರ್ಟ್!

ಮುಂದಿನ ಸುದ್ದಿ »

ನನಗೂ ಸೇರಿದಂತೆ ಅಷ್ಟಮಠದ ಸ್ವಾಮೀಜಿಗಳಿಗೆ ಮಕ್ಕಳಿದ್ದಾರೆ: ಶಿರೂರು ಮಠದ ಸ್ವಾಮಿ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×