Tuesday December 5 2017

Follow on us:

Contact Us

ಪ್ರತಾಪಸಿಂಹ ಹಾಗೂ ನನ್ನ ನಡುವೆ ಫೇಸ್ ಬುಕ್ ಕ್ಯಾಂಪೇನ್ ಬೇಡ: ಎಸ್ಪಿ ರವಿ ಚೆನ್ನಣ್ಣನವರ್

ನ್ಯೂಸ್ ಕನ್ನಡ ವರದಿ-(05.12.17): ಹುಣಸೂರಿನಲ್ಲಿ ನಡೆದ ಘಟನೆಗೆ ಕುರಿತಂತೆ ಹಲವಾರು ಜನ ಬೇರೆ-ಬೇರೆ ಬಣ್ಣವನ್ನು ಕೊಟ್ಟು ಸಂಸದರಿಗೆ ಮತ್ತು ನನಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ತುಣುಕುಗಳು ಹಾಗೂ ಫೋಟೋಗಳನ್ನು ಬಳಸಿ ಓಟು ಮಾಡಿ, ಯಾರಿಗೆ ನಿಮ್ಮ ಬೆಂಬಲ ಹಾಗೂ ಇನ್ನಿತರ ಬೇಡದ ಪೋಸ್ಟ್ ಗಳನ್ನು ಹಾಕುತ್ತಿರುವುದು ಸರಿಯಲ್ಲ ಎಂದು ಮೈಸೂರು ಎಸ್ಪಿ ರವಿ ಚನ್ನಣ್ಣನವರ್ ಮನವಿ ಮಾಡಿದ್ದಾರೆ.

ಮೈಸೂರುನಲ್ಲಿ ಕಳೆದ 1 ವರ್ಷ 4 ತಿಂಗಳುಗಳಿಂದ ರಕ್ಷಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುತ್ತೇನೆ. ಈ ಸಂದರ್ಭದಲ್ಲಿ ಯಾವುದೇ ಜಾತಿ, ಪಂಗಡ, ಧರ್ಮಕ್ಕೆ ಸೀಮಿತವಾಗದೆ, ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರ ಏಳಿಗೆಗಾಗಿ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಯತ್ನ ಪಟ್ಟಿದ್ದೇನೆ, ನನ್ನ ವೃತ್ತಿ ಜೀವನದಲ್ಲಿ ಯಾರ ವಿರುದ್ಧವೂ ದ್ವೇಷ ಸಾಧಿಸುವ ಕೆಲಸ ಮಾಡಿಲ್ಲ ಎಂದರು.

ನಾನು ಎಲ್ಲರಲ್ಲೂ ವೈಯಕ್ತಿಕವಾಗಿ ಬೇಡಿಕೊಳ್ಳುವುದೇನೆಂದರೆ ಮಾನ್ಯ ಸಂಸದರ ಹಾಗೂ ನನ್ನ ಭಾವಚಿತ್ರಗಳನ್ನು ಬಳಸಿ ಅವರ ಹೇಳಿಕೆ ಹಾಗೂ ನನ್ನ ಹೇಳಿಕೆಗಳಿಗೆ ಇಲ್ಲ ಸಲ್ಲದ ಹೋಲಿಕೆಗಳನ್ನ ಮಾಡುತ್ತಾ ತಿರುಗೇಟು ಕೊಟ್ಟರು ಎಂದು ಸುಖಾಸುಮ್ಮನೆ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದನ್ನು ನಿಲ್ಲಿಸಬೇಕು. ಹಾಗಾಗಿ ಈ ಸುಳ್ಳು ಸುದ್ದಿಗಳ ಬಗ್ಗೆ ಯಾರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನನ್ನ ಅಮಿತ್ ಶಾ ಹೇಳಿಕೆ ವೀಡಿಯೋವನ್ನು ವೈರಲ್ ಮಾಡಿದ್ದು ರವಿ ಡಿ ಚೆನ್ನಣ್ಣನವರ್!

ಮುಂದಿನ ಸುದ್ದಿ »

ಸಿದ್ದರಾಮಯ್ಯ ಸರ್ಕಾರ ಭೃಷ್ಟಾಚಾರ ರಹಿತ ಸರ್ಕಾರ: ದೇವೇಗೌಡರಿಂದ ಪ್ರಶಂಸೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×