Tuesday November 14 2017

Follow on us:

Contact Us

ರಾಮಜನ್ಮಭೂಮಿಯನ್ನು ಬಿಟ್ಟು ಬೇರೆ ಎಲ್ಲಿ ಬೇಕಾದರೂ ಮಸೀದಿ ಕಟ್ಟಿ: ಸುಬ್ರಮಣಿಯನ್ ಸ್ವಾಮಿ

ನ್ಯೂಸ್ ಕನ್ನಡ ವರದಿ(14.11.2017): ಅಯೋಧ್ಯೆಯಲ್ಲಿದ್ದ ಇತಿಹಾಸ ಪ್ರಸಿದ್ಧ ಬಾಬರೀ ಮಸ್ಜಿದ್ ಅನ್ನು ಕರಸೇವಕರು ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ನೇತೃತ್ವದಲ್ಲಿ ಧ್ವಂಸಗೊಳಿಸಿ ದಶಕಗಳೇ ಕಳೆಯಿತು. ಆದರೂ ವಿವಾದವೂ ಇನ್ನೂ ಇತ್ಯರ್ಥವಾಗಲಿಲ್ಲ. ಒಬ್ಬೊಬ್ಬರೂ ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಈ ವಿಷಯದ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ, ಮಸೀದಿಯನ್ನು ನಿಮಗೆ ಎಲ್ಲಿ ಬೇಕಾದರೂ ಕಟ್ಟಬಹುದು ಆದರೆ ಅದು ರಾಮಜನ್ಮಭೂಮಿಯಲ್ಲಿ ಅಲ್ಲ ಎಂದು ಹೇಳಿದ್ದಾರೆ.

ಈ ಕುರಿತಾದಂತೆ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿ, ಮಸೀದಿಯನ್ನು ಇಂಥದೇ ಜಾಗದಲ್ಲಿ ಕಟ್ಟಬೇಕೆಂದೇನಿಲ್ಲ. ಎಲ್ಲಿ ಬೇಕಾದರೂ ನಿರ್ಮಿಸಬಹುದು. ಮಸೀದಿಯು ನಮಾಝ್ ಮಾಡುವ ಸ್ಥಳವಾಗಿದೆ. ಮುಸ್ಲಿಮ್ ರಾಷ್ಟ್ರವಾಗಿರುವ ಸೌದಿ ಅರೇಬಿಯಾದಲ್ಲಿ ಒಂದೊಮ್ಮೆ ಮಸೀದಿ ಕುಸಿದು ಬಿದ್ದಿತ್ತು. ಅವರು ಅದನ್ನು ಅಲ್ಲೇ ನಿರ್ಮಿಸದೇ, ಬೇರೆ ಸ್ಥಳಕ್ಕೆ ಸ್ಥಳಾಂತರ ಮಾಡಿದರು. ಅದೇ ರೀತಿ ಬಾಬರಿ ಮಸೀದಿಯನ್ನು ಅಯೋಧ್ಯೆಯಲ್ಲೇ ಕಟ್ಟಬೇಕೆಂದೇನಿಲ್ಲ. ಮುಸ್ಲಿಮರು ಹೆಚ್ಚಾಗಿರುವ ಬೇರೆ ಪ್ರದೇಶಗಳಲ್ಲೂ ನಿರ್ಮಿಸಬಹುದು. ನಾವು ಮುಸಲ್ಮಾನರು ಧ್ವಂಸ ಮಾಡಿದ 40,000 ದೇವಸ್ಥಾನಗಳು ಬೇಕು ಎಂದು ಕೇಳುತ್ತಿಲ್ಲ. ನಮಗೆ, ಅಯೋಧ್ಯೆ, ಮಥುರಾ ಮತ್ತು ವಾರಣಾಸಿಯ ಮೂರು ದೇಗುಲಗಳು ಬೇಕಾಗಿದೆ ಎಂದು ಹೇಳಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕೇರಳ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮುಂದಿನ ಸುದ್ದಿ »

ಗೋರಕ್ಷಣೆಯ ನೆಪದಲ್ಲಿ ಹತ್ಯೆಗೈಯುವ ಕ್ರಿಮಿನಲ್ ಗಳಿಗೆ ಕೋಮುಬಣ್ಣವನ್ನು ಹಚ್ಚಬೇಡಿ: ನಕ್ವಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×