Tuesday January 9 2018

Follow on us:

Contact Us

ಮಹಾತ್ಮಾ ಗಾಂಧಿ ಹತ್ಯೆಯ ಕುರಿತಾದಂತೆ ಮರುತನಿಖೆ ನಡೆಸುವ ಅಗತ್ಯವಿಲ್ಲ: ಸುಪ್ರೀಮ್ ಕೋರ್ಟ್

ನ್ಯೂಸ್ ಕನ್ನಡ ವರದಿ-(9.01.18): ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟಗಾರ , ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮರು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿ ವರದಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ‘ನಾಥೂರಾಂ ವಿನಾಯಕ್ ಗೋಡ್ಸೆ ಗಾಂಧಿಯನ್ನು ಹತ್ಯೆ ಮಾಡಿರುವುದಾಗಿ ಸ್ವತಃ ಒಪ್ಪಿಕೊಂಡಿದ್ದು, ಗೋಡ್ಸೆಯೇ ಕಾರಣ ಎಂದು ಈಗಾಗಲೇ ಸ್ಪಷ್ಟವಾಗಿದೆ. ಆತ ತಾನು ಯಾಕೆ ಕೊಂದೆ ಎಂಬುದರ ಬಗ್ಗೆಯೂ ತಿಳಿಸಿದ್ದ. ಆದ್ದರಿಂದ ಈ ಪ್ರಕರಣ ಮರುತನಿಖೆ ಮಾಡುವ ಅಗತ್ಯ ಇಲ್ಲವೆಂದು ಕೋರ್ಟ್ ಹೇಳಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆ್ಯಮಿಕಸ್ ಕ್ಯೂರಿಯಾಗಿ ನೇಮಕ ಮಾಡಿದ್ದ ಹಿರಿಯ ಅಡ್ವೊಕೇಟ್ ಅಮರೇಂದ್ರ ಶರಣ್ ಅವರು ವರದಿ ನೀಡುವಂತೆ ಕೇಳಿದ್ದು, ಅದರಂತೆ ನಿನ್ನೆ ಶರಣ್ ಅವರು ವರದಿ ನೀಡಿದ್ದರು. ವರದಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ವರದಿಯಲ್ಲಿ ಗಾಂಧಿ ಹತ್ಯೆಗೆ ಸಂಬಂಧಿಸಿ ಬ್ರಿಟಿಷ್ ಗುಪ್ತಚರ ಇಲಾಖೆಯ ‘ಫೋರ್ಸ್ 136’ ಘಟಕದ ಕೈವಾಡ ಕುರಿತು ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ.

ಗಾಂಧಿ ಹತ್ಯೆ ಸಂಬಂಧಿಸಿ ಮುಂಬೈ ಮೂಲದ ಐಟಿ ಕನ್ಸಲ್ ಟೆಂಡ್ ಪಂಕಜ್ ಕುಮುಚಂದ್ರ ಫಡ್ನಿಸ್ ಪ್ರಕರಣದಲ್ಲಿ ‘ಬ್ರಿಟಿಷ್ ಗುಪ್ತಚರ ಇಲಾಖೆಯ ಫೋರ್ಸ್ 136’ ಷಡ್ಯಂತ್ರ ರಚಿಸಿ ಗಾಂಧಿ ಹತ್ಯೆ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಫಡ್ನಿಸ್ ಪಿಐಎಲ್ ಸಲ್ಲಿಸಿ ಮನವಿ ಮಾಡಿದ್ದರು. ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್ ಅಮರೇಂದ್ರ ಶರಣ್ ಅವರನ್ನು ವರದಿ ಮಾಡಿ ಸಲಹೆ ನೀಡುವಂತೆ ಸೂಚಿಸಿತ್ತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹಿಂಜಾವೇ ಮುಖಂಡನಿಗೆ ಹಲ್ಲೆಯತ್ನ ದೂರಿನ ಸತ್ಯಾಸತ್ಯತೆಯ ಕುರಿತು ಸಂಶಯವಿದೆ: ಡಿಸಿಪಿ ಹನುಮಂತರಾಯ

ಮುಂದಿನ ಸುದ್ದಿ »

ರೋಹಿ ಮಿಲನ್ ಕಮಿಟಿಯಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×