Monday January 8 2018

Follow on us:

Contact Us

ಸುರತ್ಕಲ್: ಹಿಂದೂ ಜಾಗರಣ ವೇದಿಕೆ ಮುಖಂಡನ ಕೊಲೆಗೆ ಯತ್ನ: ಆರೋಪ

ನ್ಯೂಸ್ ಕನ್ನಡ ವರದಿ-(8.01.18): ದಕ್ಷಿಣಕನ್ನಡದಲ್ಲಿ ಮೊನ್ನೆ ತಾನೇ ಸುರತ್ಕಲ್ ನ ಕಾಟಿಪಳ್ಳ ಎಂಬಲ್ಲಿ ದೀಪಕ್ ರಾವ್ ಎಂಬಾತನನ್ನು ಕೊಲೆಗೈದು ಬಳಿಕ ಕೊಟ್ಟಾರಚೌಕಿಯಲ್ಲಿ ಬಶೀರ್ ಎಂಬವರನ್ನು ಕೊಲೆಗೈದಿದ್ದರು. ಇದೀಗ ಮತ್ತೆ ಕರಾವಳಿಯಲ್ಲಿ ಹತ್ಯೆಗೆ ವಿಫಲಯತ್ನ ನಡೆದಿದ್ದು, ಹಿಂದೂ ಜಾಗರಣ ವೇದಿಕೆ ಮುಖಂಡ ಭರತ್ ಎಂಬಾತನನ್ನು ಹತ್ಯೆಗೈಯಲು ದುಷ್ಕರ್ಮಿಗಳು ಸಂಚು ನಡೆಸಿದ ಘಟನೆಯು ಇಂದು ರಾತ್ರಿ ನಡೆದಿದೆ.

ಬೈಕ್ ನಲ್ಲಿ ಬರುತ್ತಿದ್ದ ಭರತ್ ರನ್ನು ತಲವಾರು ಬೀಸಿ ಕೊಲ್ಲಲು ನಾಲ್ವರು ಮುಸುಕುಧಾರಿಗಳು ಪ್ರಯತ್ನಿಸಿದ್ದು, ಕೂಡಲೇ ಅಲ್ಲಿಂದ ತಪ್ಪಿಸಿಕೊಂಡು ಬಂದ ಭರತ್ ಸೀದಾ ಪೊಲೀಸ್ ಠಾಣೆಯೊಳಗೆ ಆಶ್ರಯ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ತನ್ನ ಮೇಲೆ ನಾಲ್ವರು ಹಲ್ಲೆ ನಡೆಸಲು ಪ್ರಯತ್ನಿಸಿದ್ದಾರೆ ಎಂದು ಭರತ್ ಹೇಳಿಕೊಂಡಿದ್ದು, ಘಟನೆಯ ಸತ್ಯಾಸತ್ಯತೆಯ ಕುರಿತು ಇನ್ನಷ್ಟೇ ತಿಳಿದು ಬರಬೇಕಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪ್ರಥಮ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಕಂಡ ಭಾರತ ತಂಡ!

ಮುಂದಿನ ಸುದ್ದಿ »

ಹಿಂಜಾವೇ ಮುಖಂಡನಿಗೆ ಹಲ್ಲೆಯತ್ನ ದೂರಿನ ಸತ್ಯಾಸತ್ಯತೆಯ ಕುರಿತು ಸಂಶಯವಿದೆ: ಡಿಸಿಪಿ ಹನುಮಂತರಾಯ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×