Tuesday November 14 2017

Follow on us:

Contact Us

ಮೂರು ದೇವಾಲಯಗಳ ಮೇಲೆ ಹಸಿರು ಬಾವುಟ ಹಾರಿಸಿದ ಕಿಡಿಗೇಡಿಗಳು!

ನ್ಯೂಸ್ ಕನ್ನಡ ವರದಿ(14.11.2017): ಧಾರ್ಮಿಕವಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ, ಸಮಾನತೆಯಿಂದ ಜೀವಿಸುವ ಪ್ರದೇಶಗಳಲ್ಲಿ ಧರ್ಮ ಸಾಮರಸ್ಯವನ್ನು ಕೆಲ ಕಿಡಿಗೇಡಿಗಳು ಹದಗೆಡಿಸುತ್ತಿದ್ದು, ಇದೀಗ ಮೂರು ಪ್ರಮುಖ ದೇವಾಲಯಗಳ ಮೇಲೆ ಹಸಿರು ಬಣ್ಣದ ಬಾವುಟವನ್ನು ಹಾರಿಸಿ ನಾಡಿನ ಆಮರಸ್ಯವನ್ನು ಹಾಳು ಮಾಡಲು ಮುಂದಾದ ಘಟನೆಯು ಮಧ್ಯಪ್ರದೇಶ ರಾಜ್ಯದ ಡಿಂಡೌರಿ ಜಿಲ್ಲೆಯಲ್ಲಿ ನಡೆದಿದೆ. ಈ ವಿಷಯವು ನಾಡಿನಾದ್ಯಂತ ಹರಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ಬಗ್ಗೆ ಪೊಲೀಸ್‌ ಅಧಿಕ್ಷಕ ವಿಪುಲ್‌ ಶ್ರೀವಾಸ್ತವ್‌ ಪ್ರತಿಕ್ರಿಯೆ ನೀಡಿದ್ದು, ಭಾನುವಾರ ಬೆಳಗ್ಗೆ ಸಮನಾಪುರ ಠಾಣಾ ವ್ಯಾಪ್ತಿಯಲ್ಲಿ ಬರುವ ಮೂರು ದೇವಾಲಯಗಳ ಮೇಲೆ ಹಸಿರು ಬಣ್ಣದ ಭಾವುಟ ಹಾರುತ್ತಿರುವುದನ್ನು ಜನ ನೋಡಿದ್ದಾರೆ. ಬಳಿಕ ಆ ಧ್ವಜಗಳನ್ನು ದೇವಾಲಯದಿಂದ ತೆಗೆದಿದ್ದಾರೆ. ಅಲ್ಲದೇ ಘಟನೆ ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎಂದರು. ಇದೇರೀತಿಯ ಘಟನೆಯು ಈ ಹಿಂದೆ ಕರ್ನಾಟಕದ ಚಾಮರಾಜನಗರ, ಸಿಂದಗಿಯಲ್ಲಿ ನಡೆದಿದ್ದು, ಈ ವೇಳೆ ಪೊಲೀಸರು ಸಂಘಪರಿವಾರ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಾಂಗ್ರೆಸ್ ಸರ್ಕಾರ ಪತನವಾಗಿ ಭಗವಾಧ್ವಜದ ನೇತೃತ್ವದಲ್ಲಿ ಧರ್ಮರಾಜ್ಯ ನಿರ್ಮಾಣವಾಗಬೇಕು: ಅನಂತ್ ಕುಮಾರ್

ಮುಂದಿನ ಸುದ್ದಿ »

ಮೈಸೂರು ಸಮೀಪ ಅಪಘಾತ: ಉಳ್ಳಾಲ ಮೂಲದ ಒಂದೇ ಕುಟುಂಬದ ಮೂವರು ಮೃತ್ಯು

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×