Wednesday October 11 2017

Follow on us:

Contact Us

ಶಾಲಾ ಪಠ್ಯಪುಸ್ತಕಕ್ಕೂ ಬಂತು ಮೋದಿ ಚಿತ್ರ: ಕಾಂಗ್ರೆಸ್ ನಿಂದ ಪ್ರತಿಭಟನೆ

ನ್ಯೂಸ್ ಕನ್ನಡ ವರದಿ-(11.10.17): ಮಹಾನಗರಿ ಮುಂಬೈನ ದಾದರ್ ಎಂಬ ಪ್ರದೇಶದಲ್ಲಿರುವ ಐಇಎಸ್ ಪದ್ಮಾಕರ್ ಧಾಮ್ ದಾರೆ ಶಾಲೆಯಲ್ಲಿ ವಿದ್ಯಾರ್ಥಿಗಳ ಪಠ್ಯ ಪುಸ್ತಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಳಸಿರುವುದು ಸದ್ಯ ವಿವಾದಕ್ಕೆ ಕಾರಣವಾಗಿದ್ದು, ವಚಾರವು ಬೆಳಕಿಗೆ ಬರುತ್ತಿದ್ದಂತೆಯೇ ಎನ್.ಸಿ.ಪಿ (ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ) ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವ ಸಂಬಂಧ ಪಠ್ಯದಲ್ಲಿ ಮೋದಿ ಚಿತ್ರವನ್ನು ಅಳವಡಿಸಲಾಗಿದೆ. ಇದೇ ಪುಸ್ತಕದಲ್ಲಿ ಕ್ಯಾರಟ್‌, ಕೇಕ್‌, ಆಪಲ್‌, ಬುಕ್‌, ಡೀರ್‌ ಚಿತ್ರಗಳನ್ನು ಬಳಸಲಾಗಿದೆ. ವಿದ್ಯಾರ್ಥಿಗಳು ಪುಸ್ತಕವನ್ನು ಮನೆಗೆ ಕೊಂಡೊಯ್ದಾಗ ಕೆಲವು ಪಾಲಕರು ದೂರು ಸಲ್ಲಿಸಿದರು. ಈ ಸುದ್ದಿ ತಿಳಿಯುತ್ತಿದ್ದಂತೆ ಎನ್‌ಸಿಪಿ ಯುವ ಘಟಕದ ಕಾರ್ಯಕರ್ತರು ಶಾಲೆಯ ಬಳಿ ಪ್ರತಿಭಟನೆ ನಡೆಸಿ, ಮೋದಿ ಚಿತ್ರವನ್ನು ತೆಗೆದು ಹಾಕಬೇಕೆಂದು ಆಗ್ರಹಿಸಿದರು. ಶಾಲೆಯ ಕಾರ್ಯದರ್ಶಿ ಶೈಲೇಂದ್ರ ಘಾರ್ಸೆ ಈ ವಿಷಯದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.’

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಣ್ಣೂರು: ಬಿಜೆಪಿ ಕಚೇರಿ ಮೇಲೆ ಪೊಲೀಸ್ ದಾಳಿ; ಮಾರಕಾಸ್ತ್ರ ಮತ್ತು ಬಾಂಬ್ ಗಳು ಪತ್ತೆ!

ಮುಂದಿನ ಸುದ್ದಿ »

ಗೋಧ್ರಾ ಹತ್ಯಾಕಾಂಡವು ಭಯೋತ್ಪಾದಕ ಕೃತ್ಯವಲ್ಲ: ಗುಜರಾತ್ ಹೈಕೋರ್ಟ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×