Sunday February 11 2018

Follow on us:

Contact Us

ಉತ್ತರಪ್ರದೇಶ ಬೋರ್ಡ್ ಪರೀಕ್ಷೆಗೆ ಹತ್ತು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರುಹಾಜರು!

ನ್ಯೂಸ್ ಕನ್ನಡ ವರದಿ-(11.2.18): ಉತ್ತರಪ್ರದೇಶದಲ್ಲಿ ಹತ್ತನೇ ಮತ್ತು ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಬರೋಬ್ಬರಿ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಗೈರುಹಾಜರಾಗುವ ಮೂಲಕ ದಾಖಲೆಯನ್ನೇ ಸೃಷ್ಟಿಸಿದ್ದಾರೆ. ಪರೀಕ್ಷೆಯು ಪ್ರಾರಂಭವಾದ ಕೇವಲ 4 ದಿನಗಳಲ್ಲೇ ಸಂಖ್ಯೆಯು ಹತ್ತು ಲಕ್ಷವನ್ನು ದಾಟಿದ್ದು, ಪರೀಕ್ಷೆಯು ಒಂದು ತಿಂಗಳ ವರೆಗೆ ಮುಂದುವರಿಯಲಿದೆ. ಈ ನಡುವೆ ಪರೀಕ್ಷೆ ಬರೆಯದವರ ಸಂಖ್ಯೆಯು ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಕಳೆದ ವರ್ಷವು ಸುಮಾರು 5 ಲಕ್ಷಕ್ಕಿಂತಲೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿರಲು ತೀರ್ಮಾನಿಸಿದ್ದು, ಈ ವರ್ಷವು ಸಂಖ್ಯೆಯು ದುಪ್ಪಟ್ಟಾಗಿದೆ ಎಂದು ತಿಳಿದು ಬಂದಿದೆ. ಉತ್ತರಪ್ರದೇಶದ ಬೋರ್ಡ್ ಪರೀಕ್ಷೆಗೆ ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 66 ಲಕ್ಷ ಮಂದಿ ಹೆಸರು ನೋಂದಾಯಿಸಿದ್ದು, ಈಗಾಗಲೇ 20 ಶೇಖಡಾ ಮಂದಿ ಪರೀಕ್ಷೆಗೆ ಗೈರು ಹಾಜರಾಗಿ, ಪರೀಕ್ಷೆ ಬರೆಯದಿರಲು ತೀರ್ಮಾನಿಸಿದ್ದಾರೆ. ಕೆಲವೇ ದಿನಗಳಲ್ಲಿ ಈ ಸಂಖ್ಯೆಯು ಇನ್ನೂ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಯುವತಿಯರೂ ಬೀರ್ ಕುಡಿಯಲು ಪ್ರಾರಂಭಿಸಿದ್ದಾರೆ, ಇದು ನಿಜಕ್ಕೂ ಆತಂಕಕಾರಿ: ಗೋವಾ ಸಿಎಂ

ಮುಂದಿನ ಸುದ್ದಿ »

ಕಾಪು: ಹಾರೆಯಿಂದ ಬಡಿದು ಕಾರ್ಮಿಕನ ಬರ್ಬರ ಕೊಲೆ!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×