Saturday August 12 2017

Follow on us:

Contact Us

ಉತ್ತರಪ್ರದೇಶ: ಆಕ್ಸಿಜನ್ ಇಲ್ಲದೇ ಪರದಾಡುತ್ತಿದ್ದ ಹಲವು ಮಕ್ಕಳನ್ನು ರಕ್ಷಿಸಿದ ಡಾ. ಕಫೀಲ್ ಅಹ್ಮದ್

ನ್ಯೂಸ್ ಕನ್ನಡ ವರದಿ-(12.08.17): ನಿನ್ನೆ ಉತ್ತರಪ್ರದೇಶದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್ ಸಮರ್ಪಕವಾಗಿ ಪೂರೈಕೆಯಾಗದ ಕಾರಣ ಆಸ್ಪತ್ರೆಯಲ್ಲಿ ದಾಖಲಾಗಿದ್ದ 63 ಮಕ್ಕಳು ಮೃತಪಟ್ಟಿದ್ದರು.  ಈ ಸಂದರ್ಭದಲ್ಲಿ ಆಕ್ಸಿಜನ್ ಪೂರೈಕೆ ಮಾಡುತ್ತಿದ್ದವರ ಅಸಡ್ಡೆಯಿಂದಾಗಿ ಈ ಘಟನೆ ನಡೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಇದೀಗ ಅದೇ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ. ಕಫೀಲ್ ಅಹ್ಮದ್ ಎಂಬವರು ಹಲವು ಮಕ್ಕಳ ಜೀವರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ.

ಶುಕ್ರವಾರದಂದು ರಾತ್ರಿ ಕಫೀಲ್ ಅಹ್ಮದ್ ಆಸ್ಪತ್ರೆಗೆ ಬಂದಾಗ ಮೆದುಳು ರೋಗದ ಮಕ್ಕಳ ವಿಭಾಗಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಆಮ್ಲಜನಕ ವ್ಯವಸ್ಥೆಯಲ್ಲಿನ ಅವ್ಯವಸ್ಥೆ ಗಮನಕ್ಕೆ ಬಂದಿತ್ತು. ಈ ವೇಳೆ ಕೂಡಲೇ ಕಾರ್ಯಪ್ರವೃತ್ತರಾದ ಕಫೀಲ್ ಅಹ್ಮದ್ ತಮ್ಮ ಸ್ವಂತ ಕಾರಿನಲ್ಲಿ ತೆರಳಿ ಆಮ್ಲಜನಕದ ಮೂರು ಸಿಲಿಂಡರ್ ಗಳನ್ನು ತಂದು ಹಲವು ಮಕ್ಕಳು ಬದುಕುವಂತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಾದ್ಯಂತ ಪ್ರಶಂಸೆಯ ಮಹಾಪೂರವೇ ಹರಿದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಾಪು ಕ್ಷೇತ್ರವನ್ನು ಶಿಕ್ಷಣ ಕೇಂದ್ರವನ್ನಾಗಿಸುವ ಸಂಕಲ್ಪ : ಸೊರಕೆ 

ಮುಂದಿನ ಸುದ್ದಿ »

ಸರ್ವಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ನದೀಮ್ ಅಹ್ಮದ್ ಆಯ್ಕೆ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×