Tuesday March 13 2018

Follow on us:

Contact Us

ಉತ್ತರಪ್ರದೇಶ: ಸಂಬಳ ಕೇಳಿದ ಮಹಿಳಾ ನೌಕರರನ್ನು ಕೊಠಡಿಯಲ್ಲಿ ಕೂಡಿಹಾಕಿ ಹಲ್ಲೆ!

ನ್ಯೂಸ್ ಕನ್ನಡ ವರದಿ-(13.3.18): ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರಕಾರವು ಆಡಳಿತಕ್ಕೆ ಬಂದ ಬಳಿಕ ಕ್ರಿಮಿನಲ್ ಕೃತ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ರಾಜ್ಯದಲ್ಲಿನ ಅಪರಾಧ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ. ಇದೀಗ ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ಸತಾಯಿಸುತ್ತಿದ್ದ ಮಹಿಳಾ ನೌಕರರು ತಮ್ಮ ಸಂಬಳವನ್ನು ಕೇಳಿದ ಕಾರಣ, ಅವರನ್ನು ಕೊಠಡಿಯೊಳಗೆ ಕೂಡಿಹಾಕಿ ಹಲ್ಲೆ ಮಾಡಿದ ಘಟನೆಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿಯ ಸಹಾಯವಾಣಿ ಕೇಂದ್ರದಲ್ಲಿ ನಡೆದಿದೆ. ಈ ಕುರಿತು ಮಹಿಳಾ ನೌಕರರು ಆರೋಪ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ಕಚೇರಿಯಲ್ಲಿ 1076 ಸಹಾಯವಾಣಿಯನ್ನು ಪ್ರಾರಂಭ ಮಾಡಲಾಗಿತ್ತು. ಇದಕ್ಕೆ ಸಿಬ್ಬಂದಿಗಳನ್ನೂ ನೇಮಿಸಿದ್ದರು. ಆದರೆ ಸುಮಾರು ನಾಲ್ಕು ತಿಂಗಳುಗಳಿಂದ ನೌಕರರಿಗೆ ವೇತನ ಸರಿಯಾಗಿ ನೀಡುತ್ತಿರಲಿಲ್ಲ. ಈ ಕುರಿತು ಅಲ್ಲಿನ ಪ್ರತಿಭಟನೆ ಪ್ರಾರಂಭಿಸಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ ಹಲವು ಮಹಿಳೆಯರು ಅಸ್ವಸ್ಥಗೊಂಡಿದ್ದರು. ಕೊನೆಗೆ ವೇತನ ಸಮಸ್ಯೆ ಪರಿಹರಿಸುತ್ತೇವೆಂದು ಮಾತುಕತೆಗೆ ಕರೆದು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆಂದು ಮಹಿಳೆಯೊರ್ವರು ಆರೋಪಿಸಿದ್ದಾರೆ. “ನಾವು ನೀಡಬೇಕಾದ ಸಂಬಳ ನೀಡಿದ್ದೇವೆ. ಬ್ಯಾಂಕ್ ಸಮಸ್ಯೆಯಿಂದ ಕೆಲವರ ಸಂಬಳ ಮಾತ್ರ ಬಾಕಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮದುವೆಗೆ ಮುನ್ನ ಬ್ಯಾಚುಲರ್ ಪಾರ್ಟಿ ಮಾಡಲು ದುಬೈಗೆ ಬಂದ ಉದ್ಯಮಿ ಮಗಳು! ಮುಂದೆ ನಡೆದದ್ದು ದುರಂತ..

ಮುಂದಿನ ಸುದ್ದಿ »

ಸಿನಿಮಾ ಶೂಟಿಂಗ್ ವೇಳೆ ಅಮಿತಾಭ್ ಬಚ್ಚನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×