ಭಾನುವಾರ ಬೆಳಿಗ್ಗೆ 8ರಿಂದ ಸೋಮವಾರ ಬೆಳಿಗ್ಗೆ 5 ಗಂಟೆ ವರೆಗು ಲಾಕ್‌ಡೌನ್.!

0
110

ನ್ಯೂಸ್ ಕನ್ನಡ ವರದಿ: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜ್ಯವ್ಯಾಪಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು.

ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೌದು, ಜು.5ರಿಂದ ರಾಜ್ಯ ವ್ಯಾಪಿ ಭಾನುವಾರ ಬೆಳಿಗ್ಗೆ 8 ರಿಂದ ಬೆಳಿಗ್ಗೆ 5ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಲಾಕ್ ಡೌನ್ ಬದಲಾಗಿ ವೀಕೆಂಡ್ ಸಂಪೂರ್ಣ ಬಂದ್ ಮಾಡಲಾಗುವುದು. ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡುವ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

LEAVE A REPLY

Please enter your comment!
Please enter your name here