ಕಲಬುರಗಿ; ರಕ್ತದಲ್ಲಿ ಬರೆದು ಕೊಡುತ್ತೇನೆ ಉಮೇಶ್ ಜಾಧವ್ ಗೆಲ್ಲುತ್ತಾರೆ: ಬಿಎಸ್ ಯಡಿಯೂರಪ್ಪ

0
222

ನ್ಯೂಸ್ ಕನ್ನಡ ವರದಿ (17-4-2019): ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಕ್ಷೇತ್ರದಲ್ಲಿ ಮಾಜಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರನ್ನು ಕಣಕ್ಕೆ ಬಿಜೆಪಿ ಇಳಿಸಿದೆ. ಕಾಂಗ್ರೆಸ್ ನ ವೀರಶೈವ ಸಮಾವೇಶಕ್ಕೆ ಸೆಡ್ಡು ಹೊಡೆಯಲು ಬಿಜೆಪಿಯೂ ಸಮಾವೇಶ ನಡೆಸಿತ್ತು. ನಗರದ ಎನ್‍ವಿ ಕಾಲೇಜು ಆವರಣದಲ್ಲಿ ನಡೆದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಇವತ್ತೇ ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಉಮೇಶ್ ಜಾಧವ್ ಸೇರಿ 300 ಜನರು ಗೆದ್ದು ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ಎಂದರು.

ಜಾಧವ್ ಅವರು ಮಾತನಾಡಿ ಶಾಸಕ ಸ್ಥಾನಕ್ಕೆ ರಿಸೈನ್ ಮಾಡಿ ರಿಸ್ಕ್ ತಗೊಂಡಿದ್ದೇನೆ. ಕಾಂಗ್ರೆಸ್ ನಾಯಕರ ವರ್ತನೆಗೆ ನೊಂದು ಹೊರಬಂದಿದ್ದೇನೆ. ನೀವು ನನಗೆ ಆಶೀರ್ವಾದ ಮಾಡಿ ಎಂದು ಕೇಳಿಕೊಂಡರು. ನಂತರ ಇಡೀ ಜನಸ್ತೋಮದ ಮುಂದೆ ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿದ ಅವರು ಮತದಾರರನ್ನು ಸೆಳೆಯಲು ಪ್ರಯತ್ನಿಸಿದರು.

LEAVE A REPLY

Please enter your comment!
Please enter your name here