ಕೊನೆಗೂ ಕಾಫಿಡೇ ಮಾಲೀಕ ಸಿದ್ದಾರ್ಥ್ ಸಾವಿನ ರಹಸ್ಯ ಬಿಚ್ಚಿಟ್ಟ ವಿಧಿವಿಜ್ಞಾನ ಪ್ರಯೋಗಾಲಯ ವರದಿ!

0
13263

ನ್ಯೂಸ್ ಕನ್ನಡ ವರದಿ (26-8-2019): ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ್ ಹೆಗ್ಡೆ ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಮಂಗಳೂರಿಗೆ ಬಂದು ಜುಲೈ ೨೯ ಸಂಜೆ ಏಳರಿಂದ ನಾಪತ್ತೆಯಾಗಿದ್ದರು. ಕಡೆಯದಾಗಿ ಅವರು ಉಳ್ಳಾಲ ನೇತ್ರಾವತಿ ಸೇತುವೆ ಮೇಲೆ ಕಾಣಿಸಿಕೊಂಡಿದ್ದರು. ಅದಾಗಿ ಎರಡು ದಿನಗಳ ನಂತರ ಜುಲೈ ೩೧ ಬೆಳಿಗ್ಗೆ ಹೊಯ್ಗೆ ಬಝಾರ್ ಸಮೀಪ, ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಾವಿಗೆ ಸಂಬಂಧಿಸಿದ ಪ್ರಕರಣದ ವಿಧಿವಿಜ್ಞಾನ ಪ್ರಯೋಗಾಲಯದ ಅಂತಿಮ ವರದಿ ಹೊರಬಂದಿದ್ದು ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಖಚಿತಪಡಿಸಿದೆ.

ಕಳೆದ ಸೋಮವಾರ ಸಿದ್ಧಾರ್ಥ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ತಜ್ಞರಿಗೆ ಎಫ್‌ಎಸ್‌ಎಲ್ ವರದಿ ತಲುಪಿದೆ. ಅಂತಿಮ ವರದಿಯನ್ನು ಶುಕ್ರವಾರ ಪ್ರಕರಣದ ತನಿಖಾಧಿಕಾರಿಗೆ ತಲುಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಮ್ಮ ವರದಿಯನ್ನು ಪ್ರಾದೇಶಿಕ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಈ ಮಧ್ಯೆ, ಪ್ರಾಥಮಿಕ ಪೋಸ್ಟ್‌ಮಾರ್ಟಂ ವರದಿಯನ್ನು ತನಿಖಾ ಅಧಿಕಾರಿಗೆ ಕಳುಹಿಸಲಾಗಿದ್ದು, ಎಫ್‌ಎಸ್‌ಎಲ್ ವರದಿಯನ್ನು ಸ್ವೀಕರಿಸಿದ ನಂತರ ಅಂತಿಮ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಇದೀಗ ಬಹಿರಂಗವಾಗಿರುವ ವರದಿಯಲ್ಲಿ ಸಿದ್ದಾರ್ಥ್ ಉಸಿರುಗಟ್ಟುವಿಕೆ ಕಾರಣ ಎಂಬುದು ಪತ್ತೆಯಾಗಿದೆ. ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಪಡೆದು, ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಎಂ.ಎ ಪದವಿ ಪಡೆದಿದ್ದರು.

LEAVE A REPLY

Please enter your comment!
Please enter your name here