ಹೃದಯಾಘಾತದಿಂದ ನಟ ಚಿರಂಜೀವಿ ಸರ್ಜ ನಿಧನ

0
60

ನ್ಯೂಸ್ ಕನ್ನಡ ವರದಿ: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರು ಹೃದಯಾಗಾಘತಕ್ಕೆ ತುತ್ತಾಗಿದ್ದರು. ಇಂತಹ ನಟ ಚಿರಂಜೀವಿ ಸರ್ಜಾ ಅವರನ್ನು, ಕೂಡಲೇ ಅವರನ್ನು ಸಮೀಪದ ಅಪಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೇ ಚಿಕಿತ್ಸೆ ಫಲಕಾರಿಯಾಗದೇ ನಟ ಚಿರಂಜೀವಿ ಸರ್ಜಾ(39) ಕೊನೆಯುಸಿರು ಎಳೆದಿದ್ದಾರೆ.

ಚಿರಂಜೀವಿ ಸರ್ಜಾ ರವರು 17 ಅಕ್ಟೋಬರ್ 1980ರಲ್ಲಿ ಜನಿಸಿದ್ದಂತ ಇವರನ್ನು ಜನ ‘ಚಿರು’ ಎಂದು ಕರೆಯುತ್ತಾರೆ. ಕನ್ನಡ ಚಲನಚಿತ್ರರಂಗದಲ್ಲಿ ನಟನಾಗಿ ಕಾಣಿಸಿಕೊಂಡಿದ್ದಾರೆ. ಇವರು ನಟ ದ್ರುವಸರ್ಜಾನ ಅಣ್ಣ ಮತ್ತು ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ ಅಷ್ಟಲ್ಲದೇ ಕನ್ನಡದ ಅನುಭವ ನಟ, ಶಕ್ತಿ ಪ್ರಸಾದ್ ರವರ ಮೊಮ್ಮಗ.

ಇವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಮ್ಮ ಬಾಲ್ಯ ಶಿಕ್ಷಣವನ್ನು ಬಾಲ್ಡ್ವಿನ್ ಬಾಲಕರ ಫ್ರೌಡ ಶಾಲೆಯಲ್ಲಿ ಪೂರ್ಣಗೊಳಿಸಿದರು.

ಅವರನ್ನು ಕೂಡಲೇ ಕುಟುಂಬಸ್ಥರು ಹತ್ತಿರದ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೇ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here