Thursday August 10 2017

Follow on us:

Contact Us
    342

ನಟಿಗೆ ಕಿರುಕುಳ ಪ್ರಕರಣ: ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಮೊರೆ ಹೋದ ದಿಲೀಪ್

ನ್ಯೂಸ್ ಕನ್ನಡ ವರದಿ-(10.08.17): ಮಲಯಾಳಂನ ಪ್ರಸಿದ್ಧ ನಟಿಯೋರ್ವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ದಿಲೀಪ್ ರನ್ನು ಜುಲೈ 10ರಂದು ಕೇರಳ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನು ನೀಡುವಂತೆ ಕೋರಿ ಸ್ಥಳೀಯ ನ್ಯಾಯಾಲಯಕ್ಕೆ ದಿಲೀಪ್ ಪರ ವಕೀಲರು ಅರ್ಜಿ ಹಾಕಿದ್ದರು.

ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಅಂಗಮಾಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ದಿಲೀಪ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು, ಮಾತ್ರವಲ್ಲದೇ 10 ದಿನಗಳ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಿತ್ತು. ಬಳಿಕ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ದಿಲೀಪ್ ಅರ್ಜಿಯನ್ನು ಹೈಕೋರ್ಟ್ ಕೂಡಾ ತಿರಿಸ್ಕರಿಸಿತ್ತು. ಇದೀಗ ಪಟ್ಟು ಬಿಡದ ದಿಲೀಪ್ ಹೈಕೋರ್ಟ್ ಒಂದು ಬಾರಿ ಮನವಿಯನ್ನು ತಳ್ಳಿ ಹಾಕಿದ್ದರೂ, ಇದೀಗ ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಲವ್ ಜಿಹಾದ್: ಸುಪ್ರೀಂ ಕೋರ್ಟ್‍ಗೆ ಸಾಕ್ಷ್ಯಗಳನ್ನು ಸಲ್ಲಿಸಲು ವಿಫಲರಾದ ವಕೀಲರು!

ಮುಂದಿನ ಸುದ್ದಿ »

ಪ್ಲಾಸ್ಟಿಕ್ ಕೈಚೀಲ ಉಪಯೋಗಿಸಿದರೆ 5,000ರೂ. ದಂಡ: ಎನ್.ಜಿ.ಟಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×