Friday October 20 2017

Follow on us:

Contact Us
    370

ಲಂಡನ್ ಬ್ರಿಟಿಷ್ ಸಂಸತ್ ಭವನದಲ್ಲಿ ಪ್ರಶಸ್ತಿ ಸ್ವೀಕರಿಸಿದ ನಟ ದರ್ಶನ್

ನ್ಯೂಸ್ ಕನ್ನಡ-(20.10.17): ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ದರ್ಶನ್ ರವರು, ಕನ್ನಡ ಚಿತ್ರರಂಗ ಹಾಗೂ ಕನ್ನಡ ಚಿತ್ರಾಭಿಮಾನಿಗಳು ಹೆಮ್ಮೆಪಡುವಂತೆ ಮಾಡಿದ್ದು, ವಿಶ್ವವಿಖ್ಯಾತ ನಗರ ಲಂಡನ್ ನಲ್ಲಿನ ಬ್ರಿಟಿಷ್ ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡದ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಿಗೆ ಬ್ರಿಟಿಷ್ ಸಂಸತ್ತಿನ ಕೆಳಮನೆಯು ಪ್ರತಿಷ್ಠಿತ ಹೌಸ್ ಆಫ್ ಕಾಮನ್ಸ್ ನೀಡುವ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ನೀಡಿದ್ದು, ಇದೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.

ಜಾಗತಿಕ ಮಟ್ಟದ ಪ್ರಶಸ್ತಿಯಿಂದ ಅತೀವ ಸಂತಸಗೊಂಡಿರುವ ದರ್ಶನ್‌, ಈ ಗೌರವವನ್ನು ಕನ್ನಡಿಗರಿಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಅರ್ಪಿಸಿದ್ದಾರೆ. ವಿಶೇಷವೆಂದರೆ ದರ್ಶನ್ ತಮ್ಮ ಪುತ್ರ ವಿನೀಶ್‌ರನ್ನೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕರೆದೊಯ್ದಿದ್ದರು. ಅದಕ್ಕೆ ಸಂಬಂಧಿಸಿದ ಫೋಟೋವನ್ನು ಟ್ವಿಟ್ಟರ್‌ನಲ್ಲೂ ಹಂಚಿಕೊಂಡಿದ್ದರು ದರ್ಶನ್.

2013ರಲ್ಲಿ ಅಮಿತಾಬ್‌ ಬಚ್ಚನ್‌, ಕಳೆದ ಸೆಪ್ಟೆಂಬರ್‌ನಲ್ಲಿ ಸಲ್ಮಾನ್‌ ಖಾನ್‌, ನಟಿ ಐಶ್ವರ್ಯ ರೈಬಚ್ಚನ್‌, ಶಾರುಖ್‌ ಖಾನ್‌, ಚೀನಾ ನಟ ಜಾಕಿ ಚಾನ್‌, ಬಾಂಗ್ಲಾ ದೇಶದ ಪ್ರಧಾನಿ ಶೇಖ್‌ ಹಸೀನಾ, ಅಮೆರಿಕ ನಾಗರಿಕ ಹಕ್ಕು ಹೋರಾಟಗಾರರಾದ ಜೆಸ್ಸಿ ಜಾಕ್ಸನ್‌ ಮತ್ತು ಫಾರ್ಮುಲಾ ಒನ್‌ ಚಾಲಕ ಲೂಯಿಸ್‌ ಹ್ಯಾಮಿಲ್ಟನ್‌ ಈ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಯಡಿಯೂರಪ್ಪ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಮನೆಗೆ

ಮುಂದಿನ ಸುದ್ದಿ »

ವಿಜಯ್ ಅಭಿನಯದ ಮೆರ್ಸಲ್ ಚಿತ್ರದಲ್ಲಿ ಜಿಎಸ್ಟಿ, ನೋಟು ರದ್ದತಿ ಕುರಿತ ಹೇಳಿಕೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×