Tuesday January 9 2018

Follow on us:

Contact Us
    796

ನಿಮ್ಮ ಪಕ್ಷದ ಹೆಸರೇನು ಎಂದು ಕೇಳಿದ್ದಕ್ಕೆ ರಜನಿಕಾಂತ್ ಹೇಳಿದ್ದೇನು ಗೊತ್ತೇ?

ನ್ಯೂಸ್ ಕನ್ನಡ ವರದಿ-(9.01.18): ಚೆನ್ನೈ: ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಾ ಲಲಿತ ಅವರ ಮರಣದ ನಂತರ ತಮಿಳುನಾಡಿನ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಎಂಟ್ರಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು.

ಇದೀಗ ರಜನಿಕಾಂತ್ ಪಕ್ಷದ ವೆಬ್ ಸೈಟ್ ಬಿಡುಗಡೆಗೊಳಿಸಿದ್ದು, ಹೆಸರನ್ನು ರಹಸ್ಯವಾಗಿಯೇ ಇಟ್ಟಿದ್ದಾರೆ. ಮಲೇಷ್ಯಾದಿಂದ ಸೋಮವಾರ ನಗರಕ್ಕೆ ಆಗಮಿಸಿದ ರಜನಿ , ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ನಿಮ್ಮ ರಾಜಕೀಯ ಪಕ್ಷದ ಹೆಸರೇನು? ಯಾವಾಗ ಘೋಷಿಸುತ್ತೀರಿ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಸದ್ಯಕ್ಕಿಲ್ಲ’ ಎಂದು ಹೇಳಿ ಹೋದರು. ಇದರಿಂದ ಅವರ ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಮೂಡಿಸಿದ್ದು, ಜತೆಗೆ ಪಕ್ಷದ ಸದಸ್ಯತ್ವ ಪಡೆಯುವುದರಲ್ಲಿ ಉತ್ಸುಕರಾಗಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹೆಣ ಇಟ್ಟುಕೊಂಡು ರಾಜಕಾರಣ ಮಾಡುವ ಕೆಲಸ ಬಿಜೆಪಿಯವರಿಗೆ ಕರಗತ: ಪರಮೇಶ್ವರ್

ಮುಂದಿನ ಸುದ್ದಿ »

ಕುಮಾರಸ್ವಾಮಿ ವಿರುದ್ಧ ₹1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ ನಾಯಕ ಡಾ. ಭರತ್ ಶೆಟ್ಟಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×