Friday January 5 2018

Follow on us:

Contact Us
    293

ದೀಪಿಕಾ ಪಡುಕೋಣೆ ಹುಟ್ಟುಹಬ್ಬದಂದೇ ರಣವೀರ್ ಸಿಂಗ್ ಜೊತೆ ನಿಶ್ಚಿತಾರ್ಥ?

ನ್ಯೂಸ್ ಕನ್ನಡ ವರದಿ-(5.01.18): ಬಾಲಿವುಡ್ ನ ಖ್ಯಾತ ನಟಿ ಅನುಷ್ಕಾ ಶರ್ಮಾ ಮತ್ತು ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಪ್ರೇಮಕಥೆಯನ್ನು ಸಾರ್ವಜನಿಕವಾಗಿ ಬಿಚ್ಚಿಟ್ಟಿದ್ದರೂ, ಗುಟ್ಟಾಗಿ ಇಟಲಿಯಲ್ಲಿ ಮದುವೆಯಾದರು. ಇದೀಗ ಅವರದೇ ಹಾದಿಯಲ್ಲಿ ಭಾರತದ ಇನ್ನೊಂದು ತಾರಾಜೋಡಿ ಸಾಗಲಿದೆ ಎಂದು ಬಲ್ಲ ಮೂಲಗಳು ಬಹಿರಂಗಪಡಿಸಿವೆ. ಬಾಲಿವುಡ್ ನ ಖ್ಯಾತನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್ ಸಿಂಗ್ ಇಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ದೀಪಿಕಾ ಹುಟ್ಟುಹಬ್ಬವೂ ಕೂಡಾ ಆಗಿದ್ದು, ಬಾಲಿವುಡ್ ಅಂಗಳದಲ್ಲಿ ಕುತೂಹಲ ಗರಿಗೆದರಿದೆ.

ಅವರಿಬ್ಬರ ನಡೆ ಈ ರೀತಿಯ ಅನುಮಾನಕ್ಕೆ ಕಾರಣವಾಗಿದೆ. ಇವರಿಬ್ಬರು ಆಗಾಗ ವಿಹರಿಸುತ್ತಾ ಇನ್ನಷ್ಟು ಗಾಳಿ ಸುದ್ದಿಗೆ ಆಹಾವಾಗುತ್ತಲೇ ಇದ್ದರು. ಇದೀಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿದೆ. ಈ ಜೋಡಿ ಇತ್ತೀಚೆಗೆ ಹೊಸ ವರ್ಷ ಸಂಭ್ರಮಾಚರಣೆಗೆ ಗುಟ್ಟಾಗಿ ಶ್ರೀಲಂಕಾಗೆ ಹಾರಿದ್ದರು. ಇದೀಗ ಜ.5ರಂದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಇದೆ.

ಜನವರಿ 5ರಂದು ದೀಪಿಕಾ ಪಡುಕೋಣೆ ಹುಟ್ಟುಹಬ್ಬ. ಇದೇ ಸಂದರ್ಭದಲ್ಲಿ ನಿಶ್ಚಿತಾರ್ಥದ ಉಡುಗೊರೆಯನ್ನು ರಣವೀರ್ ನೀಡಲಿದ್ದಾರೆ ಎನ್ನುತ್ತಿವೆ ಮೂಲಗಳು. ಸಂಜಯ್ ಲೀಲಾ ಭನ್ಸಾಲಿ ಅವರ ‘ಗೋಲಿಯೋಂಕಿ ರಾಮ್ ಲೀಲಾ’ ಚಿತ್ರದ ಮೂಲಕ ಇವರಿಬ್ಬರೂ 2013ರಲ್ಲಿ ಪರಿಚಯವಾಗಿದ್ದರು. ಅಲ್ಲಿಂದ ಇವರಿಬ್ಬರ ನಡುವಿನ ಸ್ನೇಹ ಸಂಬಂಧ ಪ್ರೀತಿಗೆ ತಿರುಗಿತ್ತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಎಲ್ಲಾ ಮುಸಲ್ಮಾನರು ತಾಲಿಬಾನಿಗಳಲ್ಲ, ಆದರೆ ನರಹಂತಕ ತಾಲಿಬಾನಿಗಳೆಲ್ಲರೂ ಮುಸಲ್ಮಾನರು: ಸಿ.ಟಿ.ರವಿ

ಮುಂದಿನ ಸುದ್ದಿ »

ಕೇಂದ್ರ ಸರ್ಕಾರಕ್ಕೆ ಪಿಎಫ್‍ಐ, ಬಜರಂಗದಳ, ರಾಮಸೇನೆಯನ್ನು ನಿಷೇಧಿಸುವ ಅಧಿಕಾರವಿದೆ: ಸಿಎಂ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×