Wednesday January 10 2018

Follow on us:

Contact Us
    251

ಮಸಾಜ್ ಪಾರ್ಲರ್ ಪ್ರಕರಣ: ಸಾಧುಕೋಕಿಲಾಗೆ ನಿರೀಕ್ಷಣಾ ಜಾಮೀನು ಮಂಜೂರು

ನ್ಯೂಸ್ ಕನ್ನಡ ವರದಿ-(10.01.18): ಮೈಸೂರು: ಮಸಾಜ್ ಪಾರ್ಲರ್ ಒಂದರಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಎದುರಿಸುತ್ತಿರುವ ಸ್ಯಾಂಡಲ್ ವುಡ್ ಹಾಸ್ಯ ನಟ ಸಾಧು ಕೋಕಿಲ ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರೆತಿದೆ.

ಕೆಲ ದಿನಗಳ ಹಿಂದಷ್ಟೇ ಬೋಗಾದಿಯ ರೈಲ್ವೇ ಬಡಾವಣೆಯ ‘ಲೈಕ್ ಟ್ರೆಂಡ್ ಹಾಗೂ ಫ್ಯಾಮಿಲಿ ಸಲೂಮ್’ ಮೇಲೆ ಪೊಲೀಸರು ದಾಳಿ ನಡೆಸಿ ಯುವತಿಯೊಬ್ಬಳನ್ನು ವೇಶ್ಯಾವಟಿಕೆ ಜಾಲದಿಂದ ರಕ್ಷಣೆ ಮಾಡಿದ್ದರು. ನಂತರ ವಿಚಾರಣೆ ವೇಳೆ ‘ಹಾಸ್ಯ ನಟರು ಹಾಗೂ ಪೊಲೀಸ್ ಅಧಿಕಾರಿಗಳಿಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ’ ಎಂಬ ಸಂಗತಿಯನ್ನು ಬಹಿರಂಗಪಡಿಸಿದ್ದು, ನಟ ಸಾಧು ಕೋಕಿಲ ಅವರು ಬಂಧನದ ಭೀತಿಯಿಂದ ಜಾಮೀನು ಮಂಜೂರು ಮಾಡುವಂತೆ ಕೋರಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇನ್ನು ಯುವತಿ ನಟರಾಗಿರುವ ಸಾಧುಕೋಕಿಲ, ಮಂಡ್ಯ ರಮೇಶ್ ಹೆಸರನ್ನು ಬಹಿರಂಗಪಡಿಸಿದ್ದು, ಸಾಧುಕೋಕಿಲ ಅವರು ಜಾಮೀನು ಕೋರಿ ಅರ್ಜಿ ಹಾಕಿದ್ದರೆ ನಟ ರಮೇಶ್ ತನ್ನ ಮೇಲಿನ ಆರೋಪ ತಳ್ಳಿ ಹಾಕಿದ್ದಾರೆಯಲ್ಲದೆ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮಂಗಳೂರು: ‘ನ್ಯೂ ಮಾರ್ಕ್ ಟ್ರೋಫಿ’ ಪ್ರೋ ಕಬಡ್ಡಿ ಪಂದ್ಯಾಟಕ್ಕೆ ಸಜ್ಜಾಗುತ್ತಿದೆ ನೆಹರೂ ಮೈದಾನ!

ಮುಂದಿನ ಸುದ್ದಿ »

ತೆರಿಗೆ ವಂಚನೆ: ಜಾಯ್ ಆಲುಕ್ಕಾಸ್ ನ ನೂರಕ್ಕೂ ಹೆಚ್ಚಿನ ಮಳಿಗೆಗಳಿಗೆ ಐಟಿ ದಾಳಿ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×