ಕಾಂಗ್ರೆಸ್‌ಗೆ ಸೇರಲು, ನಾನು ಯಾವಾಗ ರಾಜಿನಾಮೆ ಕೊಟ್ಟಿದೆ..! ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

0
195

ನ್ಯೂಸ್ ಕನ್ನಡ ವರದಿ: ಲೋಕಸಭೆ ಚುನಾವಣೆಯಲ್ಲಿ ನಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ. ಅದ್ದರಿಂದ ನಾನು ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಪ್ರಮೇಯವೇ ಬರುವುದಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್, ಸಂಸತ್ ಚುನಾವಣೆಗೆ ನಾನು ಮೈತ್ರಿ ಅಭ್ಯರ್ಥಿ ಆಗಿದ್ದರಿಂದ ತಾಂತ್ರಿಕವಾಗಿ ಕೆಲವು ಸಮಸ್ಯೆಗಳಿತ್ತು. ಈಗ ಕಾಂಗ್ರೆಸ್ ನಾಯಕರೇ ಫೋನ್​ ಮಾಡಿದ್ದರಿಂದ ಸಮಸ್ಯೆ ನಿವಾರಣೆ ಆಗಿದೆ.

ನಾನು ದಿನೇಶ್ ಗುಂಡೂರಾವ್​ಗೆ ಪತ್ರ ಬರೆದು ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶಕ್ಕಾಗಿ ಮನವಿ ಮಾಡಿದ್ದೇನೆ. ಆದ್ರೆ ನನ್ನನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ಪತ್ರ ಕೊಟ್ಟಿಲ್ಲ. ಬೇರೆ ಯಾವ ಪಕ್ಷದವರು ನನ್ನನ್ನು ಸಂಪರ್ಕ ಮಾಡಿಲ್ಲ ಎಂದರು.

LEAVE A REPLY

Please enter your comment!
Please enter your name here