ಸೋನಿಯಾ, ರಾಹುಲ್ ಗಾಂಧಿ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ!

0
586

ನ್ಯೂಸ್ ಕನ್ನಡ ವರದಿ : ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದಿರುವ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ತ್ಯಜಿಸಲು ಹಟ ಹಿಡಿದು ಕುಳಿತಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಪಕ್ಷ ಹೊಸ ನಾಯಕನನ್ನು ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕರಾಗಿರುವ ಅಹಮದ್‌ ಪಟೇಲ್‌ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರಿಗೆ ಸೋಮವಾರ ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದರ ಬೆನ್ನಲ್ಲೇ ಬುಧವಾರದಂದು ಗಾಂಧಿ ಕುಟುಂಬದ ಸದಸ್ಯರ ಅನುಪಸ್ಥಿತಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಅನೌಪಚಾರಿಕವಾಗಿ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚಿಸಲು ಭೇಟಿಯಾಗಿರುವುದು ಸಾಕಷ್ಟು ಕೂತುಹಲ ಕೆರಳಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ರಾಹುಲ್ ಗಾಂಧಿಯವರ ನಿರ್ಧಾರದ ಹಿನ್ನಲೆಯಲ್ಲಿ ಈಗ ಹಿರಿಯ ನಾಯಕರು ಸಭೆ ಸೇರಿ ಪಕ್ಷದ ಕಾರ್ಯಸೂಚಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಗೆ ಈಗ ಯಾರು ಪಕ್ಷವನ್ನು ಮುನ್ನಡೆಸಬೇಕು ಎನ್ನುವದರ ಬಗ್ಗೆ ಗೊಂದಲವಿದೆ,ಈ ಹಿನ್ನಲೆಯಲ್ಲಿ ಈಗ ಹೊಸ ಸಾಧ್ಯತೆಗಳ ವಿಚಾರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪಕ್ಷದ ನಾಯಕರು ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಒಂದೆಡೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಲು ಬದ್ದರಾಗಿದ್ದರೆ. ಉಳಿದ ನಾಯಕರು ಈ ವಿಚಾರವಾಗಿ ಮೌನ ತಾಳಿದ್ದಾರೆ. ಪಕ್ಷದ ಸಭೆಯ ನಂತರ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ನಾಯಕತ್ವದ ಕುರಿತಾಗಿ ಯಾವುದೇ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದರು. ಇನ್ನು ಪಕ್ಷದ ಮೂಲಗಳ ಪ್ರಕಾರ ಸಂಸತ್ತಿನ ಅಧಿವೇಶನದಲ್ಲಿ ಸೋನಿಯಾ ಗಾಂಧಿ ಅವರು ಕಾರ್ಯತಂತ್ರವನ್ನು ರೂಪಿಸಲಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here