ಉಪ ಚುನಾವಣೆಯಲ್ಲಿ ಕನಿಷ್ಠ 12 ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲುತ್ತದೆ!

0
2287

ನ್ಯೂಸ್ ಕನ್ನಡ ವರದಿ: ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪರ, ವಿರೋಧದ ಹೇಳಿಕೆಗಳನ್ನು ನಿಲ್ಲಿಸಿ, ಉಪ ಚುನಾವಣೆಯಲ್ಲಿ ಗೆದ್ದು ಮತ್ತೆ ಸರ್ಕಾರ ರಚಿಸುವ ಗುರಿ ಇರಲಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದರು.

ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಉಳಿಯಲು 8 ಸ್ಥಾನ ಬೇಕು. ಆದರೆ, ಅವರು ಒಂದರೆಡು ಸ್ಥಾನವನ್ನು ಗೆದ್ದರೆ ಹೆಚ್ಚು. ಕಾಂಗ್ರೆಸ್‌ ಕನಿಷ್ಠ 12 ಸ್ಥಾನಗಳನ್ನು ಈ ಉಪ ಚುನಾವಣೆಯಲ್ಲಿ ಗೆಲ್ಲುವ ಅವಕಾಶವಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ವೇಳೆ ಮುಂದೆ ಯಾರು ಸಿಎಂ ಆಗಬೇಕು ಎಂಬ ಕುರಿತು ಹೇಳಿಕೆ ನೀಡುವುದನ್ನು ಬಿಟ್ಟು, ಚುನಾವಣೆಯಲ್ಲಿ ಗೆಲ್ಲುವ ಕಡೆ ನಿಮ್ಮ ಗಮನವಿರಲಿ. ಪಕ್ಷದ ವರಿಷ್ಠೆ ಸೋನಿಯಾಗಾಂಧಿ ಸಿಎಂ ಯಾರಾಗಬೇಕು ಎಂದು ತೀರ್ಮಾನಿಸುತ್ತಾರೆ.

ಈ ಹೇಳಿಕೆಗೆ ವಿಶೇಷ ಅರ್ಥವಿಲ್ಲ. ಅನರ್ಹರನ್ನು ಸೋಲಿಸಿ, ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಕೆಡವಿ, ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರದಲ್ಲಿ ಸರ್ಕಾರ ರಚನೆ ಮಾಡೋಣ. ಮಹಾರಾಷ್ಟ್ರದಲ್ಲಿನ ಹೊಂದಾಣಿಕೆ ಮಾದರಿಯಾಗಿ, ಜಾತ್ಯತೀತ ಪಕ್ಷಗಳು ಅಧಿಕಾರಕ್ಕೆ ಬರಬೇಕು ಎಂದರು.

LEAVE A REPLY

Please enter your comment!
Please enter your name here