ಭಾರತದ ಮೂರನೇ ಕೊರೊನಾ ವೈರಸ್ ಪ್ರಕರಣ ಕಾಸರಗೋಡಿನಲ್ಲಿ ಪತ್ತೆ!

0
54

ನ್ಯೂಸ್ ಕನ್ನಡ ವರದಿ: (04.02.2020): ಚೀನಾ ದೇಶದಲ್ಲಿ ಮಾರಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಈಗಾಗಲೇ ಅಲ್ಲಿ 425ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ. ಈಗಾಗಲೇ ಭಾರತದಲ್ಲಿ ಕೇರಳ ರಾಜ್ಯದಲ್ಲಿ ಪ್ರಥಮವಾಗಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಅದರಲ್ಲಿ ಎರಡು ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿತ್ತು. ಇದೀಗ ಕಾಸರಗೋಡಿನಲ್ಲಿ ಮೂರನೇ ಪ್ರಕರಣ ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕೊರೊನಾ ವೈರಸ್ ಬಾಧಿಸಿದ್ದು, ಸದ್ಯ ಈತನನ್ನು ಕಾಸರಗೋಡು ಸಮೀಪದ ಕಾಞಂಗಾಡ್ ಆಸ್ಪತ್ರೆಯಲ್ಲಿ ವಿಶೇಷ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಯುವಕನು ಚೀನಾದ ವುಹಾನ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಜನೆಗೈಯುತ್ತಿದ್ದ ಎಂದು ತಿಳಿದು ಬಂದಿದೆ. ಇದೇ ಸೋಂಕಿಗೊಳಗಾಗಿರುವ ಇನ್ನಿಬ್ಬರು ವಿದ್ಯಾರ್ಥಿಗಳು ತ್ರಿಶೂರ್ ಹಾಗೂ ಆಲಪ್ಪುಝ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here