ರಾಜ್ಯದಲ್ಲಿ ಇಂದು ಮತ್ತೆ 42 ಮಂದಿಗೆ ಕೊರೊನ ಸೋಂಕು ಪತ್ತೆ: ಕೊರೊನ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆ

0
118

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು,ಆತಂಕ ಮುಂದುವರೆದಿದೆ. . ರಾಜ್ಯದಲ್ಲಿ ಇಂದು 42 ಮಂದಿಯಲ್ಲಿ ಕೊರೊನಾ ಸೋಂಕು ರಾಜ್ಯದಲ್ಲಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 42 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 904 ಕ್ಕೆ ಏರಿಕೆಯಾಗಿರುವುದಾಗಿ ತಿಳಿದು ಬಂದಿದೆ. ಇನ್ನು ಬಾಗಲಕೋಟೆಯಲ್ಲಿ 15, ಹಾಸನ-5, ಯಾದಗಿರಿ-2, ಧಾರವಾಡ- 9 ಬೀದರ್-2, ಬೆಂಗಳೂರು-3, ಚಿಕ್ಕಬಳ್ಳಾಪುರ-1, ದಕ್ಷಿಣ ಕನ್ನಡ- ಇಬ್ಬರಲ್ಲಿ ಮಾರಕ ಸೋಂಕು ದೃಢಪಟ್ಟಿದೆ.

ಇನ್ನೂ ಕಿಲ್ಲರ್ ಕೊರೋನಾಗೆ ಇದುವರೆಗೆ ರಾಜ್ಯದಲ್ಲಿ 31 ಜನರು ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಸೋಂಕು ಪತ್ತೆಯಾಗದ ಕಾರಣ ಗ್ರೀನ್ ಝೋನ್ ನಲ್ಲಿತ್ತು. ಆದರೆ, ಮುಂಬೈನಿಂದ ಬಂದ ಒಂದೇ ಕುಟುಂಬದ ಐವರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಇಬ್ಬರು ಮಕ್ಕಳು ಸೇರಿದ್ದಾರೆ.

LEAVE A REPLY

Please enter your comment!
Please enter your name here