ಮಂಡ್ಯ; ಸುಮಲತಾ ಅಂಬರೀಶ್ ಅವರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಚಿವ ಪುಟ್ಟರಾಜು

0
282

ನ್ಯೂಸ್ ಕನ್ನಡ ವರದಿ (16-4-2019): ಮಂಡ್ಯ ಲೋಕಸಭಾ ಚುನಾವಣೆಯು ಇಡೀ ರಾಜ್ಯದ ಗಮನವನ್ನು ಸೆಳೆದಿದೆ. ಸಿಎಂ ಕುಮಾರಸ್ವಾಮಿಯವರು ತಮ್ಮ ಪುತ್ರ ನಿಖಿಲ್ ನ ಗೆಲುವಿಗೆ ಹರಸಾಹಸ ಪಡುತ್ತಾ ಇದ್ದಾರೆ. ಸುಮಲತಾ ಅಂಬರೀಶ್ ಹಾಗೂ ನಿಖಿಲ್ ಅವರ ನಡುವೆ ನೇರ ಹಣಾಹಣಿ ನಡೆಯಲಿದೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಬಿಜೆಪಿ ಜೊತೆ ಸೇರಿ ಸುಮಲತಾ ಅವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಜೊತೆ ಸುಮಲತಾ ಚರ್ಚೆ ಮಾಡಿರುವ ವಿಡಿಯೋ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಸಚಿವ ಪುಟ್ಟರಾಜು ಹೇಳಿದ್ದಾರೆ. ಆದರೆ ಸುಮಲತಾ ಅವರು ಪ್ರಚಾರದ ಸಮಯದಲ್ಲಿ ತಾವು ಬಿಜೆಪಿ ಸೇರುವುದಿಲ್ಲ ಎಂದು ಮತದಾರರಿಗೆ ಸ್ಟಷ್ಟನೆ ನೀಡುತ್ತಿದ್ದಾರೆ. ಇನ್ನು ಇದು ಮುಂದಕ್ಕೆ ಯಾವ ತಿರುವು ಪಡೆಯಲಿದೆ ಎಂದು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here