Saturday May 28 2016

Follow on us:

Contact Us

ಬಿಜೆಪಿಗರು “ಅಂಗೈಯಲ್ಲೇ ಆಕಾಶ ತೋರಿಸಿ” ಅಧಿಕಾರಕ್ಕೆ ಬಂದವರು- ಸಚಿವ ರೈ

ನ್ಯೂಸ್ ಕನ್ನಡ ವರದಿ-ಮಂಗಳೂರು: ಮೋದಿ ಅಧಿಕಾರಾವಧಿಯಲ್ಲಿ ಯಾವುದೇ ಗಣನೀಯ ಸಾಧನೆಯೂ ಆಗಿಲ್ಲ. ಬಿಜೆಪಿಗರು ಅಂಗೈಯಲ್ಲಿ ಆಕಾಶ ತೋರಿಸಿ ಅಧಿಕಾರಕ್ಕೆ ಬಂದವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವ್ಯಂಗ್ಯವಾಡಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2 ವರ್ಷದಲ್ಲಿ ಮೋದಿ ಅಧಿಕಾರಾವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ತೈಲ ಬೆಲೆಯೂ ನಿಯಂತ್ರಣದಲ್ಲೂ ಇಲ್ಲ. ಇದೊಂದು ಯು ಟರ್ನ್ ಸರಕಾರ ಎಂದು ಅವರು ಟೀಕಿಸಿದರು.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಯುಪಿಎ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯವಾಗಿದೆ. ಎನ್ ಡಿಎ ಸರ್ಕಾರ ಸಾಧನೆ ಏನೂ ಇಲ್ಲ ಎಂದು ಹೇಳಿದರು. ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿಗೆ ಮಾನಸಿಕ ಸ್ಥಿತಿ ಸರಿ ಇಲ್ಲ. ಅವರು ಸೈಕೋ ಸುಬ್ರಹ್ಮಣ್ಯ ನ್ ಸ್ವಾಮೀ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿ ಬಂದಿಲ್ಲ. ಕೆಲವೊಂದು ನಾಯಕರ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ. ಅವರು ಚಾಲ್ತಿ ಇಲ್ಲದ ನಾಯಕರು ಎಂದು ಹೇಳಿದರು

ಈ ವೇಳೆ ಹಂಗಾಮಿ ಅಧ್ಯಕ್ಷ ಕೋಡಿಜಾಳ್ ಇಬ್ರಾಹಿಂ, ಮಾಜಿ ಮೇಯರ್ ಮಹಾಬಲ ಮಾರ್ಲ,  ಪಾಲಿಕೆ ಮುಖ್ಯಸಚೇತಕ ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

nknvfgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಮಝಾನ್‍ ನಲ್ಲಿ 50 ಲಕ್ಷ ಮಂದಿಗೆ ಉಚಿತ ಊಟ, ನೀರು ವಿತರಣೆ: ಮಕ್ಕಾ ಗವರ್ನರ್‍

ಮುಂದಿನ ಸುದ್ದಿ »

ಖಾಸಗಿ ಸಂಸ್ಥೆ ಹೆಸರಿನಲ್ಲಿ ಕೋಟ್ಯಂತರ ರೂ. ಪಂಗನಾಮ: ಆರೋಪಿ ಕಸ್ಟಡಿಗೆ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×