Saturday August 12 2017

Follow on us:

Contact Us

ದ.ಕ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಗಳಿಗೆ ಬಿಜೆಪಿ ಮತ್ತು ಎಸ್.ಡಿ.ಪಿ.ಐ ಕಾರಣ: ರಮಾನಾಥ ರೈ

ಮಡಿಕೇರಿ: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಗಲಭೆ ಹಾಗೂ ಕೊಲೆಗೆ ಎಸ್‌ಡಿಪಿಐ ಹಾಗೂ ಬಿಜೆಪಿ ಕಾರಣ. ಕಾಂಗ್ರೆಸ್ ನ ಯಾರೂ ಭಾಗಿಯಾಗಿಲ್ಲ. ನನ್ನ ಜತೆ ಮತದಾರರು ಇದ್ದಾರೆ. ನನ್ನ ಕ್ಷೇತ್ರದಲ್ಲಿ ನಡೆದ ಎಲ್ಲಾ ಚುನಾವಣೆಯಲ್ಲಿ ಮತದಾರರು ನನ್ನ ಜತೆ ಇದ್ದಾರೆ. ಮುಂದೆಯೂ ಇರುತ್ತಾರೆ. ನನ್ನ ವಿರುದ್ಧ ಒಂದೇ ಒಂದು ಆರೋಪ ಇಲ್ಲ. ನಾನು ಶೋಭಾ ಕರಂದ್ಲಾಜೆ ಹಾಗೂ ಸದಾನಂದ ಗೌಡ ಅವರಂಥಲ್ಲ,’ ಎಂದು ಸಚಿವ ರಮಾನಾಥ್ ರೈ ಹೇಳಿದರು.

ಮಡಿಕೇರಿಯಲ್ಲಿ ನಡೆದ ಅರೆಭಾಷೆ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಭೆಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಆರ್ಥಿಕವಾಗಿ ಪ್ರಬಲರಾಗಿರುವ ಶಾಲೆಗೆ ಅನುನಾದ ನೀಡುವ ಅವಶ್ಯಕತೆ ಏನಿದೆ, ರಾಜ್ಯದಲ್ಲಿ ಈ ಎರಡು ಶಾಲೆ ಮಾತ್ರ ಇದೆಯೇ ಎಂದು ಸಚಿವ ರಮಾನಾಥ್ ರೈ ಪ್ರಶ್ನಿಸಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಸಂಬಂಧಿಸಿದ ವಿದ್ಯಾಸಂಸ್ಥೆಗೆ ನೀಡುತ್ತಿದ್ದ ಅನುದಾನಕ್ಕೆ ತಡೆ ನೀಡಿದ್ದು, ಈಗಾಗಲೇ ನೀಡಿರುವ ಅನುದಾನಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲಿ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಪ್ರಚೋದಿಸಿ ಪ್ರತಿಭಟನೆ ನಡೆಸುವಂತೆ ಮಾಡಿದೆ ಎಂದು ಸಚಿವ ರಮಾನಾಥ್ ರೈ ಹೇಳಿದರು.

cts: vijaya karnataka

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಚಿತ್ರನಟ ಉಪೇಂದ್ರ ಸಾರಥ್ಯದಲ್ಲಿ ‘ಪ್ರಜಾಕೀಯ’ ಪಕ್ಷ ಸ್ಥಾಪನೆ!

ಮುಂದಿನ ಸುದ್ದಿ »

ಲಂಕಾ ವಿರುದ್ಧದ ಪಂದ್ಯದಲ್ಲಿ ವಿಶ್ವದಾಖಲೆ ಸರಿಗಟ್ಟಿದ ಕೆ.ಎಲ್ ರಾಹುಲ್

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×