ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಎಸ್ ಎಲ್ ಭೈರಪ್ಪ: ಯಡಿಯೂರಪ್ಪ

0
171

ನ್ಯೂಸ್ ಕನ್ನಡ ವರದಿ: ದಸರಾ ಹಬ್ಬದ ಆಚರಣೆಯ ಕುರಿತು ಕಳೆದ ಮೈತ್ರಿ ಸರ್ಕಾರ ಸಭೆ ನಡೆಸಿ, ಸಿದ್ದತೆಯ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ. ಈ ಕುರಿತು ದಸರಾ ಸಿದ್ದತೆಯ ಬಗ್ಗೆ ಸಭೆ ನಡೆಸಿದ ಬಳಿಕ, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ನಾಡಹಬ್ಬದ ಆಚರಣೆಗೆ 20.50 ಕೋಟಿ ರೂಪಾಯಿ ಹಣವನ್ನು ಬಿಡುಗೆಡೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನಾಡಿನ ಸಾಹಿತಿ ಎಸ್.ಎಲ್.ಭೈರಪ್ಪ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ನೆರವೇರಿಸಬೇಕು ಎನ್ನುವುದು ಎಲ್ಲರ ಒಮ್ಮತದ ಅಭಿಪ್ರಾಯವಾಗಿದ್ದು, ಎಸ್.ಎಲ್ ಭೈರಪ್ಪ ಅವರನ್ನು ಉದ್ಘಾಟನೆಗೆ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ದಸರಾ ಆಯೋಜನೆಗೆ ಈ ವರ್ಷ 20.50 ಕೋಟಿ ರೂ.ಗಳ ಅನುದಾನ ನೀಡಲಾಗುವುದು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊರರಾಜ್ಯಗಳ ಕಲಾವಿದರನ್ನು ಆಹ್ವಾನಿಸದೇ, ಕೇವಲ ರಾಜ್ಯದ ಪ್ರತಿಭಾವಂತ ಕಲಾವಿದರನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ ಪ್ರಸಾದ್, ಶಾಸಕ ತನ್ವೀರ್ ಸೇಠ್, ರಾಮ್ ದಾಸ್, ಎನ್.ಮಹೇಶ್, ಯತೀಂದ್ರ. ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ನಾಗರಾಜ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ.ಸಿ.ಕಳಸದ್ ಹಾಗೂ ಮೈಸೂರು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here