ಬಿಜೆಪಿಯೆಂದರೆ ಭ್ರಷ್ಟಾಚಾರಿ ಜನತಾ ಪಕ್ಷ: ದಿನೇಶ್ ಗುಂಡೂರಾವ್ ವ್ಯಂಗ್ಯ!

0
267

ನ್ಯೂಸ್ ಕನ್ನಡ ವರದಿ(12.5.19): ಸದ್ಯ ಮತ್ತೆ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ತೆರೆಮರೆಯಲ್ಲಿ ಗರಿಗೆದರಲು ಪ್ರಾರಂಭವಾಗಿದೆ. ಬಿಜೆಪಿ ಪಕ್ಷದಿಂದ ಮುಖ್ಯಮಂತ್ರಿ ಸ್ಥಾನದ ಕುರಿತಾದಂತೆ ಮಾತುಗಳು ಕೇಳಿ ಬರುತ್ತಿದ್ದರೆ, ಇತ್ತ ಕಾಂಗ್ರೆಸ್ ಪಕ್ಷದಿಂದ ಕೂಡಾ ಮುಖ್ಯಮಂತ್ರಿ ಹೆಸರುಗಳು ಕೇಳಿ ಬರುತ್ತಿದೆ. ಈ ನಡುವೆ ಇದೀಗ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದಿನೇಶ್ ಗುಂಡೂರಾವ್, ಬಿಜೆಪಿ ಎಂದರೆ ಭ್ರಷ್ಟಾಚಾರಿಗಳ ಜನತಾ ಪಕ್ಷ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕಸಭೆ ಹಾಗೂ ರಾಜ್ಯದ ಉಪ ಚುನಾವಣೆಗಳಲ್ಲಿ ಸೋಲುವ ಭಯದಿಂದ ಬಿಜೆಪಿಯವರು ಮನ ಬಂದಂತೆ ಮಾತನಾಡುತ್ತಿದ್ದಾರೆ. ಐದು ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿಗೆ 160 ಸೀಟು ಸಿಗಲಿದೆ ಎಂದು ಹೇಳಿರುವ ಬೆನ್ನಲ್ಲೇ, ಪ್ರಧಾನಿ ಮೋದಿ ಕೂಡ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ’ ಎಂದರು. ‘23ರ ಚುನಾವಣಾ ಫಲಿತಾಂಶವೂ ಬಡಾಯಿಗಳ ಬಾಯಿ ಮುಚ್ಚಿಸಲಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚಿಸಲಿದೆ. ಅದರಂತೆ, ಉಪ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ಹೇಳಿದರು.

LEAVE A REPLY

Please enter your comment!
Please enter your name here