ಪ್ರತಿ ಜಿಲ್ಲೆಯಲ್ಲೂ ಪಕ್ಷ ಸಂಘಟನೆ: ಡಿಕೆಶಿ ಧೃಡ ಸಂಕಲ್ಪ; ಕನಕಪುರದಿಂದಲೇ ಸಂಘಟನೆಗೆ ಚಾಲನೆ

0
71

ನ್ಯೂಸ್ ಕನ್ನಡ ವರದಿ: ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ತಮ್ಮ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಡಿ.ಕೆ.ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ

ಹೈಕಮಾಂಡ್ ಸೂಚನೆಯ ಮೇರೆಗೆ ಒಂದೆಡೆ ಪಕ್ಷದ ಹಿರಿಯ ನಾಯಕರು, ಪಕ್ಷ ಬಿಟ್ಟು ಹೋದವರನ್ನೆಲ್ಲಾ ಭೇಟಿಯಾಗುತ್ತಿದ್ದರೆ ಮತ್ತೊಂದೆಡೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಪ್ರವಾಸದ ರೂಪುರೇಷೆ ಸಿದ್ಧಗೊಂಡಿದ್ದು ಮತಕ್ಷೇತ್ರ ಕನಕಪುರದಿಂದಲೇ ಸಂಘಟನೆಗೆ ಚಾಲನೆ ನೀಡಿದ್ದಾರೆ.

ರಾಮನಗರ ಜಿಲ್ಲೆಗೆ ಮೊದಲ ಸೇವಕ. ಪಕ್ಷದ ಕಾರ್ಯಕರ್ತರಿಗೆ ಮೊದಲ ಆದ್ಯತೆ ಎಂದರು.ಮುಂದೆ 28 ಬ್ಲಾಕ್ ಕಾಂಗ್ರೆಸ್ ಘಟಕಗಳಿಗೆ ಭೇಟಿ ಕೊಡುವುದೂ ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತರ ಭೇಟಿ ಹಾಗೂ ರಾಜ್ಯದ ಪ್ರತಿ ಜಿಲ್ಲೆಗೂ ಪ್ರವಾಸ ಮಾಡುತ್ತೇನೆ ಈಗ ಕನಕಪುರದಿಂದ ಪ್ರಾರಂಭವಾಗಿದೆ. ಮನೆದೇವರ ಮೂಲಕ ಪ್ರವಾಸ ಪ್ರಾರಂಭ ಮಾಡಿದ್ದೇನೆ ಎಂದರು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here