ಮಹಾರಾಷ್ಟ್ರದಲ್ಲಿ 450 ಅಡಿ ಎತ್ತರದ ‘ಅಂಬೇಡ್ಕರ್’ ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನ!: ಮಹಾರಾಷ್ಟ್ರ ಸರ್ಕಾರ

0
16

ನ್ಯೂಸ್ ಕನ್ನಡ ವರದಿ: ಮಹಾರಾಷ್ಟ್ರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 450 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.

ಈ ಹಿಂದೆ ಮಹಾ ಸರ್ಕಾರ, 350 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಿತ್ತು, ಆದರೆ ಇದೀಗ ಮತ್ತೆ 100 ಅಡಿಗೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಮುಂಬೈನ ಚೆತ್ಯಭೂಮಿ ಬಳಿಯ ಅಂಬೇಡ್ಕರ್ ಸ್ಮಾರಕದ ಬಳಿ ಈ ಪ್ರತಿಮೆ ನಿರ್ಮಾಣವಾಗಲಿದ್ದು, ಮುಂದಿನ 2ವರ್ಷದಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಯಲಿದೆ ಎಂದು ಡಿಸಿಎಂ ಅಜಿತ್ ಪವರ್ ಹೇಳಿದ್ದಾರೆ. 450 ಅಡಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಒಟ್ಟು 1100 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here