72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡುವಂತಿಲ್ಲ: ಪ್ರಜ್ಞಾ ಸಿಂಗ್ ಗೆ ನಿಷೇಧ!

0
93

ನ್ಯೂಸ್ ಕನ್ನಡ ವರದಿ : ಇತ್ತೀಚಿನ ದಿನಗಳಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರ ರಾಜಕೀಯ ಚರ್ಚಾ ವಿಷಯವಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಬಾಬ್ರಿ ಮಸೀದಿ ಧ್ವಂಸದಲ್ಲಿ ನಾನು ಭಾಗಿಯಾಗಿದ್ದೆ ಹಾಗೂ ಹೇಮಂತ್ ಕರ್ಕರೆ ನನ್ನ ಶಾಪದಿಂದ ಮೃತಪಟ್ಟಿದ್ದಾರೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಈ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದರು.

ಈ ಹೇಳಿಕೆಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಬಿಜೆಪಿಯ ಭೋಪಾಲ್ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗುರುವಾರದಿಂದ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸುವಂತಿಲ್ಲ ಎಂದು ನಿಷೇಧ ಹೇರಿದೆ. ಇನ್ನು ಸಾಧ್ವಿ ಸಿಂಗ್ ಮುಂದಿನ ಎರಡು ದಿನ ಯಾವುದೇ ಸಾರ್ವಜನಿಕ ಸಮಾರಂಭದಲ್ಲಿ, ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುವಂತಿಲ್ಲ. ಇದಕ್ಕೆ ಮೊದಲು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೂ ಇದೇ ಶಿಕ್ಷೆ ಸಿಕ್ಕಿತ್ತು. ಆಯೋಗ ಹೇರಿದ ನಿಷೇಧದ ಬಳಿಕ ಗುರುವಾರ ಬೆಳಿಗ್ಗೆ ರಿವೇರಾ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾದ ಸಾಧ್ವಿ, ಭೂಪಾಲದ ಕರ್ಫ್ಯೂ ವಾಲಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here