Tuesday January 10 2017

Follow on us:

Contact Us

ಕನ್ನಡ ಜಾನಪದ ಪರಿಷತ್‍ನ ದ.ಕ. ಜಿಲ್ಲಾ ಅಧ್ಯಕ್ಷರಾಗಿ ಡಾ.ಅನುರಾಧಾ ಕುರುಂಜಿ

ನ್ಯೂಸ್ ಕನ್ನಡ ವರದಿ(10.01.2017)-ಸುಳ್ಯ: ಕನ್ನಡ ಜಾನಪದ ಪರಿಷತ್‍ನ ದ.ಕ ಜಿಲ್ಲಾ ಅಧ್ಯಕ್ಷರಾಗಿ ನೆಹರೂ ಮೆಮೊರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ.ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯದಾದ್ಯಂತ ಕನ್ನಡ ಜಾನಪದ ಪರಿಷತ್ ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ದಾಖಲೀಕರಣ, ತರಬೇತಿ, ಪ್ರಕಟಣೆಗಳು, ವಸ್ತು ಸಂಗ್ರಹ, ದ್ವನಿ ಮುದ್ರಣ, ಜಾನಪದ ಕಲಾವಿದರ ಮಾನ-ಸನ್ಮಾನ, ಪ್ರಶಸ್ತಿ ಪದಾನ ಮುಂತಾದ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿಕೊಂಡು ಬರುತ್ತಿದೆ. ಇದೀಗ ನಗರ ಕೇಂದ್ರಿತದಿಂದ ಜಾನಪದ ಚಟುವಟಿಕೆಗಳನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯುವ ಸಲುವಾಗಿ ಜಿಲ್ಲಾ ಸಮಿತಿಯನ್ನು ರಚಿಸಿದ್ದು, ತಾಲೂಕು ಗ್ರಾಮ ಮಟ್ಟದಲ್ಲೂ ಜಾನಪದ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ಮುನ್ನಡೆಸುವ ಸಲುವಾಗಿ ಇವರನ್ನು ದ.ಕ.ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಈ ಮೊದಲು ಹಾವೇರಿಯ ಜಾನಪದ ವಿಶ್ವ ವಿದ್ಯಾಲಯದ ಗ್ರಾಮ ಚರಿತ್ರೆ ಕೋಶ ಯೋಜನೆಯ ಕ್ಷೇತ್ರ ತಜ್ಞೆಯಾಗಿ ದುಡಿದಿರುವುದಲ್ಲದೇ, ವಿದ್ಯಾರ್ಥಿಗಳಲ್ಲಿ ಜಾನಪದ ಕಲೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿವಿಧೆಡೆ ಜಾನಪದ ಚಟುವಟಿಕೆಗಳನ್ನು ಸಂಘಟಿಸಿರುವ ಹಾಗೂ ಕ್ಷೇತ್ರ ಕಾರ್ಯ ನಡೆಸಿರುವ ಇವರು ತಾಲೂಕು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳೊಂದಿಗೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದೀಗ ಕನ್ನಡ ಜಾನಪದ ಪರಿಷತ್‍ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಥಮ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇವರು ಕುರುಂಜಿ ಪದ್ಮಯ್ಯ ಗೌಡ ಸೀತಮ್ಮ ದಂಪತಿಗಳ ಪುತ್ರಿ, ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

nkdksgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಧರ್ಮಸ್ಥಳದ ಜಮೀನು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸ್ತಾಂತರ

ಮುಂದಿನ ಸುದ್ದಿ »

ರಾಷ್ಟ್ರಮಟ್ಟದ ವಾಲಿಬಾಲ್: ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಒಡಿಸ್ಸಾ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ ತಂಡಗಳ ಜಯಭೇರಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×