Tuesday January 10 2017

Follow on us:

Contact Us

ದೋಷ ನಿವಾರಣೆಗಾಗಿ ಜ.15 ರಂದು ಭಾಗಮಂಡಲದಲ್ಲಿ ವಿಶೇಷ ಪೂಜೆ

ನ್ಯೂಸ್ ಕನ್ನಡ ವರದಿ(10.01.2017)-ಮಡಿಕೇರಿ: ಲೋಕ ಕಲ್ಯಾಣಕ್ಕಾಗಿ ಹಾಗೂ ಜಿಲ್ಲೆಯ ದೋಷ ನಿವಾರಣೆಗಾಗಿ ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ಜ.15 ರಂದು ಭಾಗಮಂಡಲದಲ್ಲಿ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಶತ ರುದ್ರಾಭಿಷೇಕ ಹಾಗೂ ಚಂಡಿಕಾ ಹೋಮಗಳನ್ನು ಆಯೋಜಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ನ ಅಧ್ಯಕ್ಷರಾದ ಮುದ್ದಂಡ ಬಿ. ದೇವಯ್ಯ, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಮುಂಭಾಗದ ಬಯಲು ಪ್ರದೇಶದಲ್ಲಿ ಜ.15 ರಂದು ನಡೆಯುವ ಧಾರ್ಮಿಕ ಕೈಂಕರ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿವಿಧ ಪೂಜಾ ಕಾರ್ಯಗಳು ಬೆಳಗ್ಗೆ 7:30 ಗಂಟೆಯಿಂದ ಆರಂಭಗೊಳ್ಳಲಿದ್ದು, ನಾಡು ಸುಭಿಕ್ಷವಾಗಲಿ ಎಂದು ಪ್ರಾರ್ಥಿಸಲಾಗುವುದೆಂದರು.

ಪೂಜೆಯ ನಂತರ ಸಭಾ ಕಾರ್ಯಕ್ರಮವೂ ನಡೆಯಲಿದ್ದು, ದೋಷ ಪರಿಹಾರದ ಕುರಿತು ವಿಚಾರ ವಿನಿಮಯ ನಡೆಯಲಿದೆ. ನಾಡಿನ ಶಾಂತಿ ಹಾಗೂ ಸುಭಿಕ್ಷೆಗಾಗಿ 2014ನೇ ಇಸವಿಯಲ್ಲಿ ಜ.15 ರಿಂದ 24ನೇ ತಾರೀಕಿನವರೆಗೆ ಶ್ರೀ ಕೃಷ್ಣ ಯಜುಯಾಗ, ಚಂಡಿಕಾ ಹೋಮ ಹಾಗೂ ಇತರ ಪೂಜಾ ಕಾರ್ಯಗಳನ್ನು ನಡೆಸಲಾಗಿತ್ತು. ಆ ನಂತರದ ವರ್ಷಗಳಲ್ಲಿ ಪ್ರತಿ ವರ್ಷ ಜ.15 ರಂದು ಗಣಪತಿ ಹೋಮ, ಚಂಡಿಕಾ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶತರುದ್ರಾಭಿಷೇಕವನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಹಿಂದೆ ತಲಕಾವೇರಿ ಹಾಗೂ ಶ್ರೀ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಮೂಲಕ ತಲಕಾವೇರಿಯಲ್ಲಿ ನಡೆಸಿದ ತಾಂಬೂಲ ಪ್ರಶ್ನೆಯಲ್ಲಿ ಶ್ರೀ ಅಗಸ್ತ್ಯೇಶ್ವರ ಸನ್ನಿಧಿಯಲ್ಲಿ ದೋಷವಿದೆಯೆಂದು ತಿಳಿದು ಬಂದಿತೆಂದು ಎಂ.ಬಿ.ದೇವಯ್ಯ ಹೇಳಿದರು.

ಇದೇ ಕಾರಣಕ್ಕೆ ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲಿ ಸಂಕಷ್ಟ ಎದುರಾಗಬಹುದೆಂದು ತಿಳಿದು ಬಂದ ಕಾರಣ, ಅದರ ನಿವಾರಣೆಗೆ ಮುಂದಿನ ಮೂರು ವರ್ಷಗಳ ಒಳಗಾಗಿ ಅಗತ್ಯ ಕಾರ್ಯಗಳನ್ನು ಮಾಡಲಾಗುವುದೆಂದು ನಿರ್ಧರಿಸಲಾಗಿತ್ತು. ಆದರೆ, ವ್ಯವಸ್ಥಾಪನಾ ಸಮಿತಿ ವಿಸರ್ಜನೆ ಗೊಂಡಿರುವುದರಿಂದ ಈ ಧಾರ್ಮಿಕ ಕಾರ್ಯವನ್ನು ನಡೆಸಲು ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ನಾಡಿನಲ್ಲಿ ಬರದ ಪರಿಸ್ಥಿತಿ ಉಂಟಾಗಿದೆ ಮತ್ತು ಕೊಡಗು ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆದಿದೆಯೆಂದು ಎಂ.ಬಿ. ದೇವಯ್ಯ ಅಭಿಪ್ರಾಯಪಟ್ಟರು.

ನಾಡಿನಲ್ಲಿ ಶಾಂತಿ ನೆಲೆಸಲಿ ಎನ್ನುವ ಕಾರಣಕ್ಕಾಗಿ ದೋಷ ಪರಿಹಾರ ಕಾರ್ಯ ಪೂರ್ಣಗೊಳ್ಳುವವರೆಗೆ ಟ್ರಸ್ಟ್ ಮೂಲಕವೆ ಹೋಮ ಹವನಾದಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜ.15 ರಂದು ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿದೆ ಎಂದರು.

ದೋಷ ಪರಿಹಾರಕ್ಕಾಗಿ ಇನ್ನೂ ಅನೇಕ ಪೂಜಾಕೈಂಕರ್ಯಗಳು ನಡೆಯಬೇಕಾಗಿದ್ದು, ಅನುದಾನಕ್ಕಾಗಿ ಸರ್ಕಾರದ ಮೊರೆ ಹೋಗಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಟ್ರಸ್ಟ್‍ನ ಮನವಿಗೆ ಸ್ಪಂದಿಸಿದ್ದು, ಅನುದಾನ ದೊರಕಿಸುವ ಭರವಸೆ ನೀಡಿದ್ದಾರೆ ಎಂದು ಎಂ.ಬಿ. ದೇವಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರುಗಳಾದ ಅಮ್ಮತ್ತೀರ ಆರ್. ಕೃಷ್ಣಕುಮಾರ್, ಮನೆಯಪಂಡ ಕಾಂತಿ ಸತೀಶ್, ಕಾರ್ಯದರ್ಶಿ ನಾಣಯ್ಯ, ಸದಸ್ಯರುಗಳಾದ ಮುಂಡಂಡ ಬಿ. ಪೂವಪ್ಪ ಹಾಗೂ ಕೊಳ್ಳಿಮಾಡ ಪೆಮ್ಮಯ್ಯ ಉಪಸ್ಥಿತರಿದ್ದರು.

nkicmgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕ್ಯಾಸಿಯಾ ಆಮದು ಸ್ಥಗಿತ ಸ್ವಾಗತಾರ್ಹ: ಲಿಯೋನಾರ್ಡ್ ಜಾನ್

ಮುಂದಿನ ಸುದ್ದಿ »

ಜ.13 ರಂದು ಕುಂಞಿಯಡ ಕೊಡವ ಜನಪದ ಸಾಂಸ್ಕೃತಿಕ ನಮ್ಮೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×