Thursday October 12 2017

Follow on us:

Contact Us

ಹಾದಿ ತಪ್ಪಿಸುವ ಸಾಮಾಜಿಕ ಜಾಲತಾಣಗಳಿಂದ ದೂರವಿರಲು ವಿದ್ಯಾರ್ಥಿಗಳಿಗೆ ಕರೆ: ಅಭಿನವ ಖರೆ

ನ್ಯೂಸ್ ಕನ್ನಡ ವರದಿ-(12.10.17): ಸಾಮಾಜಿಕ ಜಾಲತಾಣಗಳು ಇಂದು ಯುವ ಜನತೆಯನ್ನು ಹಾದಿ ತಪ್ಪಿಸುವ ನಿಟ್ಟಿನಲ್ಲಿ ತನ್ನ ಕಬಂದ ಬಾಹುಗಳನ್ನು ಚಾಚಿ ಮುನ್ನಡೆದುಕೊಂಡು ಹೋಗುತ್ತಿರುವುದು ವಿಷಾದನೀಯ ಸಂಗತಿ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಕಳವಳ ವ್ಯಕ್ತಪಡಿಸಿದರು.

ಅವರು ಇಂದು ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ಅಧ್ಯಯನ ವಿಭಾಗ ಮತ್ತು ಮಹಿಳಾ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಾಕ್ತನ ಪ್ರದರ್ಶನ ಶಾಲೆ ಉದ್ಘಾಟನಾ ಸಮಾರಂಭ ಹಾಗೂ ಯುವ ಜನತೆಯ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಫೇಸ್‍ಬುಕ್, ಟ್ವೀಟರ್, ವಾಟ್ಸ್‍ಅಪ್ ನಂತಹ ಸಾಮಾಜಿಕ ಜಾಲತಾಣಗಳ ದಾಸ್ಯಕ್ಕೆ ಗುರಿಯಾಗದಂತೆ ಎಚ್ಚರ ವಹಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯ ಎಂದರು.

ಮಾನಸಿಕ ಹಾಗೂ ಭಾವನಾತ್ಮಕ ದೌರ್ಬಲ್ಯತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಸಾಮಾಜಿಕ ಜಾಲ ತಾಣಗಳಿಂದ ದೂರ ಉಳಿಯುವುದು ಸೂಕ್ತ ಎಂದು ಕಿವಿಮಾತು ಹೇಳಿದ ಅವರು ವಿದ್ಯಾರ್ಥಿಗಳು ಯಾವುದೇ ಸಮಯದಲ್ಲಿ ಇಂತಹ ಸೈಬರ್ ಕ್ರೈಂಗೆ ಸಂಬಂಧಪಟ್ಟಂತಹ ಅನಾಹುತಗಳಿಗೆ ಒಳಗಾದಲ್ಲಿ ತಕ್ಷಣವೇ ಸೈಬರ್ ಪೊಲೀಸ್‍ರ ನೆರವು ಪಡೆಯುವುದು ತುಂಬಾ ಸೂಕ್ತ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಜೋಗನ್ ಶಂಕರ್‍ರವರು ಶಿವಮೊಗ್ಗದ ಎಸ್.ಪಿ. ಕಛೇರಿಯಿಂದ ವಿಶ್ವವಿದ್ಯಾಲಯದ ಮ್ಯೂಸಿಯಂಗೆ ಸಲ್ಲಿಸಿದ ಪ್ರಾಕ್ತನಾವಶೇಷಗಳನ್ನು ಸ್ವೀಕರಿಸಿ ಮಾತನಾಡಿ ಬೇರೆಲ್ಲ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೋಲಿಸಿದರೆ ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಮಾಜಿಕ ಜಾಲ ತಾಣಗಳಿಂದ ದೂರವಿರುವ ಅಂಶ ನಮ್ಮ ಗಮನಕ್ಕೆ ಬಂದಿದ್ದು, ಇದು ತುಂಬಾ ಸಂತೋಷದ ವಿಷಯ ಎಂದರು.

ಕಾರ್ಯಕ್ರಮದಲ್ಲಿ ಪ್ರೊ. ರಾಜಾರಾಮ್ ಹೆಗಡೆ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಸರ್ವಮಂಗಳ ಜಿ. ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರುಗಳು ಭಾಗವಹಿಸಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ತ್ಯಾಜ್ಯ ಘಟಕಕ್ಕೆ ವಿರೋಧದ ಹಿಂದೆ ರಾಜಕೀಯ ನಡೆಯುತ್ತಿದೆ; ಸೊರಕೆ ಆರೋಪ

ಮುಂದಿನ ಸುದ್ದಿ »

ಕೆಲಸದಿಂದ ವಜಾ ಮಾಡಿದ್ದಕ್ಕೆ ಕಂಪೆನಿಯ ಗೇಟ್ ಮುಂದೆಯೇ ಕಾರ್ಮಿಕರ ಪ್ರತಿಭಟನೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×