Friday December 2 2016

Follow on us:

Contact Us
bg

20 ಲಕ್ಷ ರೂ. ನಿಷೇಧಿತ ನೋಟುಗಳ ಸಾಗಾಟ ಪತ್ತೆ

ನ್ಯೂಸ್ ಕನ್ನಡ ವರದಿ(02.12.2016)ಕಾಸರಗೋಡು: ಮಂಜೇಶ್ವರ ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಹವಾಲ ಹಣ ವಶಪಡಿಸಿಕೊಂಡಿದ್ದು, ಅಮಾನ್ಯ ಗೊಳಿಸಿದ 5,00 ಮತ್ತು 1,000 ರೂ. ಗಳ 20 ಲಕ್ಷ ರೂ. ವನ್ನು ವಶಪಡಿಸಿಕೊಳ್ಳಲಾಗಿದೆ.

ಚೌಕಿಯ ಅಬ್ದುಲ್ ಖಾದರ್ (42)ನನ್ನು ಈ ವೇಳೆ ಬಂಧಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗಫೂರ್ ಎಂಬಾತನ ಬ್ಯಾಗನ್ನು ತಪಾಸಣೆ ನಡೆಸಿದಾಗ ಹವಾಲ ಹಣ ಪತ್ತೆಯಾಗಿದೆ. ಈತನನ್ನು ಕೂಡ ವಿಚಾರಣೆಗೊಳಪಡಿಸಲಾಗುತ್ತಿದೆ. ಕರ್ನಾಟಕದಿಂದ ಅಕ್ರಮ ಮದ್ಯ ಮತ್ತು ಹಣ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯಂತೆ ವಾಹನ ತಪಾಸಣೆ ನಡೆಸಿದಾಗ ಅಕ್ರಮ ಹಣ ಸಾಗಾಟ ಪತ್ತೆ ಯಾಗಿದೆ. ಮುಂಬೈ ಯಿಂದ ಈ ಹಣವನ್ನು ಕಾಸರಗೋಡಿಗೆ ತರಲಾಗುತ್ತಿತ್ತು ಎನ್ನಲಾಗಿದೆ.

ನೋಟು ಅಮಾನ್ಯಗೊಳಿಸಿದ ಬಳಿಕ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನೋಟು ಸಾಗಾಟ ಪತ್ತೆಯಾಗಿದೆ. 6 ಲಕ್ಷದ ಹೊಸ ನೋಟುಗಳ ಸಹಿತ ಐದು ಮಂದಿಯನ್ನು ಕೆಲ ದಿನಗಳ ಹಿಂದೆ ಕಾಸರಗೋಡು ಪೊಲೀಸರು ಬಂಧಿಸಿದ್ದರು.

nkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬ್ಯಾಟರಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮುಂದಿನ ಸುದ್ದಿ »

ಗ್ರಾ.ಪಂ ಕಚೇರಿ ಮೇಲೆ ಹೆಜ್ಜೇನು ದಾಳಿ: ಪಂಚಾಯತ್ ಸಿಬಂದಿಗಳು ಸೇರಿ ಆರು ಮಂದಿಗೆ ಗಾಯ

ಸಿನೆಮಾ

  • marali

    “ಮರಳಿ ಮನೆಗೆ” ಧ್ವನಿಸುರುಳಿ ಬಿಡುಗಡೆ ಸಂಭ್ರಮ

    February 24, 2017

    ನ್ಯೂಸ್ ಕನ್ನಡ(24-2-2017): ಖ್ಯಾತ ಬರಹಗಾರ, ಚಿಂತಕ, ರಂಗಕರ್ಮಿ ಯೋಗೇಶ್ ಮಾಸ್ಟರ್ ನಿರ್ದೇಶನದ ಚೊಚ್ಚಲ ಚಲನಚಿತ್ರ “ಮರಳಿ ಮನೆಗೆ”ಯ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಯೋಗೇಶ್ ಮಾಸ್ಟರ್ ನಾದಬ್ರಹ್ಮ ಹಂಸಲೇಖ ಅವರು “ದೇಸಿ ಸಂಗೀತದ ...

    Read More
  • bhavana

    ನಟಿ ಭಾವನಾರನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದವನ ಬಂಧನ

    February 18, 2017

    ನ್ಯೂಸ್ ಕನ್ನಡ(18-2-2017): ಚಿತ್ರನಟಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಳಂನಲ್ಲಿ ಭಾವನಾ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವನಾ ಅವರ ಕಾರು ಚಾಲಕನಾಗಿದ್ದ ...

    Read More
  • Marali Manege

    ಸೆನ್ಸಾರ್ ಮಂಡಳಿಯವರನ್ನೂ ಕಣ್ಣೀರು ಹಾಕಿಸಿದ ಚಿತ್ರ ಬಿಡುಗಡೆಗೆ ಸಿದ್ಧ

    February 16, 2017

    ಯೋಗೇಶ್ ಮಾಸ್ಟರ್ ನಿರ್ದೇಶನದ ಚಿತ್ರ ಸಂಘಪರಿವಾರ-ಪ್ರಗತಿಪರರ ಅಭಿಪ್ರಾಯವನ್ನೂ ಬದಲಿಸಬಹುದಂತೆ ನ್ಯೂಸ್ ಕನ್ನಡ ವರದಿ(16.02.2017)-ಮಂಗಳೂರು: ಯೋಗೇಶ್ ಮಾಸ್ಟರ್ ಅವರು ನಿರ್ದೇಶಿಸಿರುವ ‘ಮರಳಿ ಮನೆಗೆ’ ಕನ್ನಡ ಚಿತ್ರವು ಇದೀಗ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿದ್ದು, ನಾಯಕರ ವೈಭವೀಕರಣದ ಚಿತ್ರಗಳನ್ನೇ ನೋಡಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×