Monday December 4 2017

Follow on us:

Contact Us

ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ಕೊಲ್ಲರಕೋಡಿಯಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ನ್ಯೂಸ್ ಕನ್ನಡ ವರದಿ-(04.12.17): ಮಂಗಳೂರು: ದ.ಕ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲರಕೋಡಿ ಹಳೆವಿದ್ಯಾರ್ಥಿ ಸಂಘ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಬ್ಲಡ್ ಡೋನರ್ಸ್ ಮಂಗಳೂರು ಮತ್ತು ಯೇನಪೋಯ ಮೆಡಿಕಲ್ ಕಾಲೇಜ್ ದೇರಳಕಟ್ಟೆ ಇದರ ಸಹಯೋಗದೊಂದಿಗೆ ದಿನಾಂಕ: 3-12-2017 ಆದಿತ್ಯವಾರ ಕೊಲ್ಲರಕೋಡಿ ಶಾಲಾ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರವು ಬಹಳಾ ವಿಜ್ರಂಭನೆಯಿಂದ ನಡೆಯಿತು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್ ನರಿಂಗಾನ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರೆ, ಉದ್ಯಮಿ ಮುಸ್ತಾಫ ಎಸ್.ಎಂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಮಂಗಳೂರು ವಿದಾನ ಸಭಾ ಕ್ಷೇತ್ರಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚ್ ಮುಖಂಡರಾದ ಡಾ. ಮುನೀರ್ ಬಾವ, ಅಸ್ಗರ್ ಅಲಿ ಮುಡಿಪು, ನರಿಂಗಾನ ಗ್ರಾ.ಪಂ ಅಧ್ಯಕ್ಷ ಇಸ್ಮಾಯಿಲ್ ಮೀನಾಕೋಡಿ, ಬ್ಲಡ್ ಡೋನರ್ಸ್ ಮಂಗಳೂರು ಅಧ್ಯಕ್ಷ ಸಿದ್ದೀಕ್ ಉರ್ಣಿ ಮಂಜೇಶ್ವರ, ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಯೆನೆಪೋಯ ಕಾಲೇಜಿನ ಡಾ. ರೇಣುಕ, ಡಾ. ಗಾಝಾನಾ, ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸಿದ್ದೀಕ್ ಪಾರೆ, ಗೌರವ ಸಲಹೆಗಾರ ಪೇಮಾನಂದ ರೈ, ಕೋಶಾಧಿಕಾರಿ ವಿಜಾಯನಂದ ರೈ, sಸಂಘಟನಾ ಕಾರ್ಯದರ್ಶಿ ಅಶ್ರಫ್ ಎಸ್.ಎಚ್, ಕಾರ್ಯದರ್ಶಿ ಚೇತಾನ್ ಶೆಟ್ಟಿ, ಜೆಡಿಎಸ್ ಮುಖಂಡ ಮೊೈದೀನ್ ಸಿಹಾಬ್ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು. ಐವತ್ತಕ್ಕೂ ಹೆಚ್ಚು ಉತ್ಸಾಹಿ ಯುವಕರು ರಕ್ತದಾನ ಮಾಡಿ ಸಹಕರಿಸಿದರು.

ರಕ್ತ ಅಗತ್ಯ ಬಂದಾಗ ವಿಶೇಷ ಸೇವೆ ನೀಡಿದ ಯೆನೆಪೋಯ ಅಸ್ಪತ್ರೆಯ ಕೆ.ಶಾನಿ ಪಿ. ಸಾಜಿಯವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಲೋಗೋ ಹೊಂದಿದ ಆಟಗಾರರ ಯುನಿಫಾರ್ಮ್ ಈ ಸಂಧರ್ಭದಲ್ಲಿ ಬಿಡುಗಡೆ ಮಾಡಲಾಯಿತು. ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿವೇಕಾನಂದ ರೈ ಸ್ವಾಗತಿಸಿದರು. ಅಧ್ಯಕ್ಷ ನವಾಝ್ ನರಿಂಗಾನ ವಂದಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದತ್ತಪೀಠದಲ್ಲಿ ಪೆಟ್ರೋಲ್ ಬಾಂಬ್: 13 ಮಂದಿ ಪೊಲೀಸ್ ವಶಕ್ಕೆ!

ಮುಂದಿನ ಸುದ್ದಿ »

ನನ್ನ ಅಮಿತ್ ಶಾ ಹೇಳಿಕೆ ವೀಡಿಯೋವನ್ನು ವೈರಲ್ ಮಾಡಿದ್ದು ರವಿ ಡಿ ಚೆನ್ನಣ್ಣನವರ್!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×