Friday June 9 2017

Follow on us:

Contact Us

ರಾಣಿಬೆನ್ನೂರು ಲಯನ್ಸ್ ಶಾಲೆಯಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ನ್ಯೂಸ್ ಕನ್ನಡ ವರದಿ (08.06.2017): ಆಹಾರ ಸೇವನೆಯಲ್ಲಿ ಹಲ್ಲುಗಳ ಪಾತ್ರ ಅತ್ಯಂತ ಮಹತ್ವದ್ದು, ಅವು ಹಾಳಾಗದಂತೆ ಜೋಪಾನವಾಗಿ ನೋಡಿಕೊಳ್ಳಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ ಎಂದು ದಾವಣಗೆರೆ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನ ಡಾ. ಸಿದ್ದರಾಮೇಶ್ವರ ಹೇಳಿದರು.

ನಗರದ ಲಯನ್ಸ್ ಶಾಲೆಯಲ್ಲಿ ಬುಧವಾರ ಸ್ಥಳೀಯ ಲಯನ್ಸ್, ಲಯನೆಸ್ಸ್ ಕ್ಲಬ್ ಗಳು, ದಾವಣಗೆರೆ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು. ತಂಬಾಕು ಪದಾರ್ಥ ಸೇವನೆ, ಸರಿಯಾಗಿ ಹಲ್ಲುಜ್ಜದೇ ಇರುವುದರಿಂದ ಹಲ್ಲುಗಳಿಗೆ ಸಂಬಂಧಿಸಿದ ಹಲವಾರು ಕಾಯಿಲೆಗಳು ಬರುತ್ತವೆ, ಹಾಗಾಗಿ ಹಲ್ಲು ಹುಳುಕು ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದು ಹಲ್ಲನ್ನು ಸಂರಕ್ಷಿಸಿ, ಹಲ್ಲು ನೋವು ಶುರುವಾಗುವ ವರೆಗೆ ಕಾಯುವುದು ಬೇಡ ಎಂದು ಸಲಹೆ ನೀಡಿದರು. ಅಲ್ಲದೇ ಸಮೀಪದಲ್ಲಿರುವ ಯಾವುದೇ ದಂತ ಕಾಲೇಜನ್ನು ಭೇಟಿ ನೀಡಿ ಅವರಿಂದ ಉಚಿತವಾಗಿ ತಪಾಸಣೆ ಮಾಡಿಸಿ ಮುಂಜಾಗ್ರತೆ ವಹಿಸಿ ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಎಂ ಎಸ್ ಅರಕೇರಿ ಅಧ್ಯಕ್ಷತೆ ವಹಿಸಿದ್ದರು, ಬಿ.ಬಿ ನಂದ್ಯಾಲ್, ರಾಜಣ್ಣ ಪಾಟೀಲ್, ನೂರ್ ಜಹಾನ್ ನಂದ್ಯಾಲ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ವೈದ್ಯರಾದ ಡಾ.ಆಫಿಯಾ ಅನ್ವರ್, ಡಾ.ಪೂಜ, ಡಾ.ಅರುಣ, ಡಾ. ಪ್ರಿಯಾಂಕ, ಡಾ.ಫೆಲಿನ್ ಶಿಬಿರಕ್ಕೆ ಆಗಮಿಸಿದ ರೋಗಿಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನಕಲಿ ಕ್ಷೀರಾಭಿವೃದ್ಧಿ ಅಧಿಕಾರಿ ಪೊಲೀಸ್ ಬಲೆಗೆ

ಮುಂದಿನ ಸುದ್ದಿ »

ದುಬೈಯಲ್ಲಿ ವಾಸವಾಗಿರುವ ಹಿಂದೂ ಸಹೋದರನ ರಮಝಾನ್ ಅನುಭವ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×