Thursday March 31 2016

Follow on us:

Contact Us

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಆರೋಗ್ಯ ವಿ.ವಿ. ಸಿಂಡಿಕೇಟ್ ಪ್ರಪ್ರಥಮ ಬ್ಯಾರಿ ಮುಸ್ಲಿಮ್ ಮಹಿಳಾ ಸದಸ್ಯೆ ಡಾ.ಖತೀಜಾ ಅನಿಶಾ

ನ್ಯೂಸ್ ಕನ್ನಡ ವರದಿ-ಮಂಗಳೂರು: ಕರ್ನಾಟಕ ಸರಕಾರದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಲ್ಲಿ ಪ್ರಪ್ರಥಮ ಬಾರಿಗೆ ಬ್ಯಾರಿ ಸಮುದಾಯದಿಂದ ಸಿಂಡಿಕೇಟ್ ಸದಸ್ಯೆಯಾಗಿ ಅಯ್ಕೆಯಾದ ಡಾ.ಖತೀಜಾ ಅನಿಶಾ ರವರು ಇಂದು ತೊಕ್ಕೊಟ್ಟಿನ ಯುನಿಟಿ ಹಾಲ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಉಳ್ಳಾಲ ಅಳೇಕಲ ನಿವಾಸಿ ಖಾದರ್ ಹಸನ್ ಹಾಗೂ ಹಲೀಮಾ ಖಾದರ್ ದಂಪತಿಯ ಪುತ್ರಿಯಾಗಿರುವ ಡಾ.ಖತೀಜಾ ಅನಿಶಾ ರವರು ಪುತ್ತೂರು ತಾಲೂಕಿನ ಕಡಬ ನಿವಾಸಿ ಬೆಂಗಳೂರಿನಲ್ಲಿ ಇಂಜಿನಿಯರಾಗಿ ಕಾರ್ಯ ನಿರ್ವಹಿಸುತ್ತಿರುವ ಸಲೀಂ ಅಹ್ಮದ್ ರವರನ್ನು ವರಿಸಲಿದ್ದಾರೆ. ಡಾ.ಖತೀಜಾ ಅನಿಶಾ ರವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಬ್ಯಾರಿ ಸಮುದಾಯದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯಲ್ಲಿ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇವರ ವೈವಾಹಿಕ ಜೀವನಕ್ಕೆ ರಾಜ್ಯ, ಜಿಲ್ಲೆಯ ರಾಜಕೀಯ, ಧಾರ್ಮಿಕ, ಸಾಮಾಜಿಕ ನಾಯಕರು ಶುಭ ಹಾರೈಸಿದ್ದಾರೆ.

nkrhu

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕೊಪ್ಪಳ: ಯುವತಿ ನೀರಿಗೆ ಹಾರಿ ಆತ್ಮಹತ್ಯೆ

ಮುಂದಿನ ಸುದ್ದಿ »

ಮಂಗಳೂರು: ಮತ್ತೆ ಸೋರಿಕೆಯಾದ ಪ್ರಶ್ನೆ ಪತ್ರಿಕೆ; ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×