Monday November 13 2017

Follow on us:

Contact Us

ದುಬೈಯಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಗಮ

ನ್ಯೂಸ್ ಕನ್ನಡ ವರದಿ(13.11.2017): ವಿಶ್ವ ವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಹಳೆಯ ವಿದ್ಯಾರ್ಥಿಗಳ ಸಂಗಮ ಕಾರ್ಯಕ್ರಮವು ದುಬೈಯ ಗ್ರ್ಯಾಂಡ್ ಪ್ಲ್ಯಾಝಾ ಹೋಟೆಲಿನಲ್ಲಿ ದಿನಾಂಕ 10 ನೇ ನವೆಂಬರ್ 2017ರ ಶುಕ್ರವಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಉದಯ್ ಕುಮಾರ್ ಅವರು ಮಧ್ಯ ಪೂರ್ವದಲ್ಲಿ ಅಲುಮ್ನಿ ಅಸೋಸಿಯೇಷನ್ ಅಧ್ಯಾಯವನ್ನು ಬಲಪಡಿಸಲು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು. 2018 ರಲ್ಲಿ ಕಾಲೇಜು 150ನೇ ವಾರ್ಷಿಕೋತ್ಸವವನ್ನು ಆಚರಿಸಲು ತಯಾರಾಗಿದ್ದು ಹಲವು ಕಾರ್ಯಕ್ರಮಮತ್ತು ಯೋಜನೆಗಳು ಅವಿರತವಾಗಿ ನಡೆಯುತ್ತಿವೆ ಎಂದು ಹೇಳಿದರು.

ಪ್ರಮುಖ ಹಳೆಯ ವಿದ್ಯಾರ್ಥಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಾ.ಎಂ.ವೀರಪ್ಪ ಮೊಯಿಲಿ ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊಫೆಸರ್. ಕೆ. ಬೈರಪ್ಪರವರ ಮಾರ್ಗದರ್ಶನದೊಂದಿಗೆ ಕಾಲೇಜಿನ ಅಭಿವೃದ್ಧಿ ಯೋಜನೆಗಳು ನಡೆಯುತ್ತಿದೆ ಎಂದು ವಿವರಿಸಿದರು.ಕಾಲೇಜಿನ ಯೋಜನೆಗಳ ಬಗ್ಗೆ ಬಹಳ ಮೆಚ್ಚುಗೆ ಸೂಚಿಸಿದ ಹಳೆಯ ವಿದ್ಯಾರ್ಥಿಗಳು ತಮ್ಮ ಬೆಂಬಲದ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಶ್ರೀಯುತರಾದ ದಯಾ ಕಿರೋಡಿಯನ್, ಸಿರಾಜ್ ಪಜೀರ್, ಶೌಕತ್ ಅಲಿ, ಮೊಹಮ್ಮದ್ ಅಲಿ ಉಚ್ಚಿಲ್, ಪ್ರವೀಣ್, ಸದಾಶಿವ ದಾಸ್ ಮತ್ತು ಶ್ರೀಮತಿ ರಂಜಿನಿ ಜಗದೀಶ್ ರವರನ್ನು ಒಳಗೊಂಡ ಏಳು ಸದಸ್ಯರ ಮುಖ್ಯ ಸಮಿತಿಯನ್ನುರಚಿಸಲಾಯಿತು. ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲು ಮತ್ತು ಅಸೋಸಿಯೇಷನ್ ಬಲಪಡಿಸಲು ತೀರ್ಮಾನಿಸಲಾಯಿತು. ಇಂಗ್ಲಿಷ್ ಪ್ರಾಧ್ಯಾಪಕಿಯಾದ ಡಾ.ರಾಜಲಕ್ಷ್ಮಿಯವರು ಹಳೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು ಮತ್ತುಕಾಲೇಜಿನ ಕಾರ್ಯಕ್ರಮಗಳಿಗೆ ಬೆಂಬಲವನ್ನು ಕೋರಿದರು. ಯಶಸ್ವಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ನೆನಪುಗಳನ್ನು ಹಂಚಿಕೊಂಡರು.

ಶ್ರೀ ಶೌಕತ್ ಅಲಿ ಕಾರ್ಯಕ್ರಮ ನಿರೂಪಿಸಿದರು ಮತ್ತು ಶ್ರೀ ದಯಾ ಕಿರೊಡಿಯನ್ ಧನ್ಯವಾದಗಳನ್ನು ಪ್ರಸ್ತಾಪಿಸಿದರು. ಶ್ರೀ ಫ್ರಾಂಕ್ ಫೆರ್ನಾಂಡಿಸ್ ಮತ್ತು ಶ್ರೀ ಯೋಗೇಶ್ ಶೆಟ್ಟಿ ಜೆಪ್ಪು ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬಿಜೆಪಿಗರು ಏನೇ ಹೇಳಲಿ, ನಾನೊಬ್ಬ ಅಪ್ಪಟ ಶಿವಭಕ್ತ: ರಾಹುಲ್ ಗಾಂಧಿ

ಮುಂದಿನ ಸುದ್ದಿ »

ಮೂರು ದೇವಾಲಯಗಳ ಮೇಲೆ ಹಸಿರು ಬಾವುಟ ಹಾರಿಸಿದ ಕಿಡಿಗೇಡಿಗಳು!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×