Thursday October 12 2017

Follow on us:

Contact Us

ಸೌಹಾರ್ದಯುತ ಸಮಾಜ ನಿರ್ಮಿಸುವುದು ಇಂದಿನ ಅನಿವಾರ್ಯತೆಯಾಗಿದೆ: ಶಕುಂತಲಾ ಶೆಟ್ಟಿ

ನ್ಯೂಸ್ ಕನ್ನಡ ವರದಿ-(12.10.17): ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯ ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಕೈ ಜೋಡಿಸುವುದು ಕಾಲ ಘಟ್ಟದ ಅನಿವಾರ್ಯತೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಹೇಳಿದರು.

ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ ಸರಕಾರೀ ಪ್ರಾರ್ಥಮಿಕ ಶಾಲೆ ಗಡಿಯಾರ ಇಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಂ.ಜೆ.ಎಂ. ಗಡಿಯಾರ್ ಇಲ್ಲಿನ ಖತೀಬರಾದ ಟಿ.ಪಿ. ಜಮಾಲುದ್ದೀನ್ ದಾರಿಮಿ ಪ್ರಾರ್ಥಿಸಿದರು. ಕಣಚೂರು ಸಮೂಹ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಯು.ಕೆ. ಮೋನು ಅಧ್ಯಕ್ಷತೆಯನ್ನು ವಹಿಸಿದ್ದರು. ಸುಮಾರು 400ಕ್ಕೂ ಅಧಿಕ ಮಂದಿ ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

ಮುಖ್ಯ ಅತಿಥಿಗಳಾಗಿ ಎಂ.ಜೆ.ಎಂ. ಗಡಿಯಾರ್‍ನ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಪಾರ್ಪಕಜೆ, ಸರಕಾರೀ ಪ್ರಾರ್ಥಮಿಕ ಶಾಲೆ ಗಡಿಯಾರಿನ ಸಹ ಶಿಕ್ಷಕರಾದ ಸದಾನಂದ ಶೆಟ್ಟಿ ನೇರಳಕಟ್ಟೆ ವ್ಯ.ಸೇ.ಸ. ಬ್ಯಾಂಕಿನ ಉಪಾಧ್ಯಕ್ಷರಾದ ಕುಶಲ ಎಂ. ಪೆರಾಜೆ, ಪುತ್ತೂರು ನಗರ ಸಭೆಯು ನಾಮ ನಿರ್ದೇಶಿತ ಸದಸ್ಯ ಹರ್ಷದ್ ದರ್ಬೆ, ಎಂ. ಪ್ರೆಂಡ್ಸ್‍ನ ಸದಸ್ಯ ಆಶಿಕ್ ಕುಕ್ಕಾಜೆ, SಆPI ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಜಬೀರ್ ಅರಿಯಡ್ಕ, ಮದರಂಗಿ ಮಾಸಿಕದ ಸಂಪಾದಕ ಡಿ.ಐ. ಅಬೂಬಕ್ಕರ್ ಕೈರಂಗಳ, ಅಕ್ಷರ ಮಾಧ್ಯಮ ಸಂಸ್ಥೆಯ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಯಿಲ್, ಶಾಲಾ Sಆಒಅ ಅಧ್ಯಕ್ಷರಾದ ಇಬ್ರಾಹಿಂ ಪೇರಮೊಗ್ರು, SಆPI ಕಾರ್ಬೆ ವಲಯದ ಉಪಾಧ್ಯಕ್ಷರಾದ ಉಸ್ಮಾನ್ ಎ.ಕೆ., ಇತ್ತಿಫಾಕ್ ಮೀಲಾದ್ ಕಮಿಟಿಯ ಗೌರವಾಧ್ಯಕ್ಷ ಹೈದರ್ ವಿದ್ಯಾನಗರ, ಅಧ್ಯಕ್ಷರಾದ ರಶೀದ್ ಜೋಗಿಬೆಟ್ಟು, ಉಪಾಧ್ಯಕ್ಷರಾದ ಯೂಸುಫ್, ಹಿರಿಯ ಸದಸ್ಯರಾದ ರಿಯಾಝ್ ವಿದ್ಯಾನಗರ, ಅಝೀಝ್ ವಿದ್ಯಾನಗರ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಪಿ.ಜೆ. ಅಬ್ದುಲ್ ಅಝೀಝ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕೆಲಸದಿಂದ ವಜಾ ಮಾಡಿದ್ದಕ್ಕೆ ಕಂಪೆನಿಯ ಗೇಟ್ ಮುಂದೆಯೇ ಕಾರ್ಮಿಕರ ಪ್ರತಿಭಟನೆ

ಮುಂದಿನ ಸುದ್ದಿ »

ಪತ್ರಕರ್ತೆ ಗೌರಿ ಲಂಕೇಶ್ ಗೆ ಗೌರವ ನಮನ ಸಲ್ಲಿಸಿದ ಆರೆಸ್ಸೆಸ್ ಮುಖಂಡರು

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×