Monday January 9 2017

Follow on us:

Contact Us
9

ಮಹಿಳಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ

ನ್ಯೂಸ್ ಕನ್ನಡ ವರದಿ (9-1-17): ಕಾರವಾರ: ನೋಟ್ ಬ್ಯಾನ್ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಮುಖಂಡರು ಸೋಮವಾರ  ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಾಂಗ್ರೆಸ್ ಮುಖಂಡರು ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾಮಣಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಹಾಕುತ್ತಾ, ನಗರದ ಮಿತ್ರಸಮಾಜದ ಮಾರ್ಗವಾಗಿ ಬೃಹತ್ ಮೆರವಣೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಬಳಿ ಬಂದು ಸಮಾವೇಶಗೊಂಡು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಈ ವೇಳೆಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಕಾಂಗ್ರೆಸ್ ಮುಖಸ್ಥರು ಕೇಂದ್ರ ಸರಕಾರದ ವಿರುಧ್ಧ ಘೋಷಣೆಗಳನ್ನು ಕೂಗಿದರು. ತಕ್ಷಣ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರಗೊಳ್ಳಬಹುದು ಎನ್ನುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯ ಗೇಟಿನ ಹೊರ ಭಾಗದಲ್ಲಿ ಪೊಲೀಸ್ ಬ್ಯಾರಿಕೇಡ್‍ಗಳನ್ನು ಹಾಗೂ ಪ್ರತಿಭಟನಾಕಾರರನ್ನು ತಡೆದಿದ್ದರು.

ಆಕ್ರೋಶಗೊಂಡ ಮಹಿಳಾ ಕಾಂಗ್ರೆಸ್ ಮುಖ್ಯಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬ್ಯಾರಿಕೇಡ್ ತೆಗೆಯುವಂತೆ ಒತ್ತಾಯಿಸಿದರು. ಆದರೆ ಇದಕ್ಕೆ ಪೊಲೀಸರು ಒಪ್ಪದಿದ್ದಾಗ ಪ್ರತಿಭಟನಾಕಾರರು ಆಕ್ರೋಶಗೊಂಡು ತಮ್ಮ ಬೇಡಿಕೆಗಳನ್ನು ಪೂರೈಸಿಕೊಳ್ಳಲು ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಪ್ರಾಥಮಿಕ ಹಂತದಲ್ಲೇ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನಾಕಾರದಿಂದ ಮನವಿ ಸ್ವೀಕರಿಸಲು ಬರಬೇಕಾಗಿದ್ದ ಜಿಲ್ಲಾಧಿಕಾರಿ ಬರಲು ತಡ ಮಾಡಿದರು ಎನ್ನುವ ಕಾರಣಕ್ಕೆ ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಸುಷ್ಮಾ ರಾಜಗೋಪಾಲ ರೆಡ್ಡಿ, ಕೆಪಿಸಿಸಿ ನಿರ್ದೇಶನದಂತೆ ಪ್ರತಿಭಟನೆ ಮಾಡುತ್ತಿದ್ದೇವೆ. ಮೋದಿ ಅವರು ನೋಟ್ ಬ್ಯಾನ್ ಮಾಡಿದ್ದರಿಂದ ಜನರು ಜೀವನ ನಿರ್ವಹಣೆ ಕಷ್ಟಕರವಾಗಿದೆ. ದೇಶದ ಆರ್ಥಿಕ ಪರಿಸ್ಥಿತಿಯನ್ನು 50 ದಿನದೊಳಗೆ ಬಗೆಹರಿಸುವ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರು ತಮ್ಮ ಭರವಸೆಯನ್ನು ಉಳಿಸಿಕೊಳ್ಳುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಕುಮಟಾ ಶಾಸಕಿ ಶಾರದಾ ಶೆಟ್ಟಿ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಇಂದಿನ ದಿನದಲ್ಲಿ ಜನ ಸಾಮಾನ್ಯರು ಹಣಕ್ಕಾಗಿ ದಿನವಿಡಿ ಬ್ಯಾಂಕ್‍ ಗಳ ಮುಂದೆ ನಿಲ್ಲುವ ಪರಿಸ್ಥಿತಿ ಇನ್ನೂ ನಿಂತಿಲ್ಲ. ದೇಶದೆಲ್ಲೆಡೆ ಚಿಲ್ಲರೆ ಅಭಾವ ಎದುರಿಸುತ್ತಿದೆ. ಪ್ರಾರಂಭದಲ್ಲಿ ಪ್ರಧಾನಿ ಮೋದಿ ಅವರ ನಿರ್ಧಾರನ್ನು ಎಲ್ಲರೂ ಸ್ವಾಗತಿಸಿದ್ದರು. ಆದರೆ ದಿನ ಕಳೆಯುತ್ತಿದ್ದಂತೆ, ಜನರ ಸಮಸ್ಯೆಗಳು ಹೆಚ್ಚುತ್ತಿದೆ. ಮೋದಿ ಅವರ ನಿರ್ಧಾರದಿಂದ ದೇಶದ ಜನತೆ ಈಗ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲಾವತಿ ವಾಜ್, ರಾಜ್ಯ ಸಂಚಾಲಕಿ ಗಾಯತ್ರಿ ನೇತ್ರೇಕರ್, ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷೆ ತಾರಾ ಗೌಡ, ಮುಖಂಡರಾದ ಶ್ರೀಪಾದ ಹೆಗಡೆ, ಶಿರಸಿ ನಗರಸಭೆ ಅಧ್ಯಕ್ಷ ಪ್ರದೀಪ ಶೆಟ್ಟಿ, ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೀಪಕ ವೈಂಗಣಕರ್, ಸಂತೋಷ ಶೆಟ್ಟಿ, ಸಂತೋಷ ನಾಯ್ಕ ಗುರುಮಠ, ಸೈಯದ್ ಅಶ್ರಫ್ ಹಾಗೂ ಇನ್ನಿತರರು ಭಾಗವಹಿಸಿದ್ದರು.

nksbkhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಜಾತ್ಯಾತೀತ ಶಕ್ತಿಗಳ ಐಕ್ಯತೆಗೆ ಇಲ್ಯಾಸ್ ತುಂಬೆ ಕರೆ

ಮುಂದಿನ ಸುದ್ದಿ »

ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

ಸಿನೆಮಾ

  • 3

    ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

    January 19, 2017

    – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

    Read More
  • Chennai-Express-First-Look-tbwm

    ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

    January 18, 2017

    ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

    Read More
  • ra-one

    “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

    January 18, 2017

    ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×